ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಲ್ಲಿ ಪ್ರಶಸ್ತಿ ಸ್ಥಾಪಿಸಿ: ದಿನೇಶ್‌ ಗೂಳಿಗೌಡ

Last Updated 4 ಜೂನ್ 2022, 19:47 IST
ಅಕ್ಷರ ಗಾತ್ರ

ಬೆಂಗಳೂರು: ‘ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಲ್ಲಿ ಪ್ರಶಸ್ತಿ ಸ್ಥಾಪಿಸಬೇಕು ಮತ್ತು ಅವರ ಜಯಂತಿಯನ್ನುಸರ್ಕಾರದ ವತಿಯಿಂದ ಆಚರಿಸಬೇಕು’ ಎಂದು ಒತ್ತಾಯಿಸಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರಿಗೆ ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ದಿನೇಶ್‌ ಗೂಳಿಗೌಡ ಪತ್ರ ಬರೆದಿದ್ದಾರೆ.

‘ಜೂನ್ 4 ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನ. ಸರ್ಕಾರದ ವತಿಯಿಂದಲೇ ಜನ್ಮದಿನ ಆಚರಿಸಬೇಕು. ಅಲ್ಲದೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿರುವ ಸಾಧಕರನ್ನು ಗುರುತಿಸಿ, ಅವರಿಗೆ ಒಡೆಯರ್‌ ಹೆಸರಿನಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಬೇಕು. ಇದರಿಂದ ಪ್ರಶಸ್ತಿಯ ಮೌಲ್ಯವೂ ಹೆಚ್ಚುತ್ತದೆ. ಒಡೆಯರ್ ಅವರಿಗೂ ಗೌರವ ಸಲ್ಲಿಸಿದಂತಾಗುತ್ತದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಒಡೆಯರ್ ಅವರು ರಾಜ್ಯಕ್ಕೆ ನೀಡಿದ ಕೊಡುಗೆಗಳು ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿವೆ. ಕಲೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ಕೈಗಾರಿಕೆ, ನೀರಾವರಿ, ಆರ್ಥಿಕ ಚಟುವಟಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕೃಷಿ, ಸಮಾಜ ಸುಧಾರಣೆ, ಮಹಿಳಾ ಶಿಕ್ಷಣ ಹೀಗೆ ಎಲ್ಲ ಕ್ಷೇತ್ರಗಳ ಬೆಳವಣಿಗೆಗೂ ಅವರು ಅವಿರತ ದುಡಿದಿದ್ದಾರೆ. ಕನ್ನಂಬಾಡಿ ಅಣೆಕಟ್ಟು ನಿರ್ಮಿಸಲು ತಮ್ಮ ಕುಟುಂಬದ ಸ್ವಂತ ಬಂಗಾರವನ್ನು ಮಾರಾಟ ಮಾಡಿ ಹಣ ಹೊಂದಿಸಿದರೆಂಬ ಕೀರ್ತಿ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗಾಗಿ ಅವರು ಮಾಡಿದ ತ್ಯಾಗ ಯಾರು ಮರೆಯಲಾಗದ್ದು’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT