ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಜಿಸಿ ಮಾರ್ಗಸೂಚಿ ಅನುಷ್ಠಾನಗೊಳಿಸಿ: ಡಿಪ್ಲೊಮಾ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಡಿಪ್ಲೊಮಾ ವಿದ್ಯಾರ್ಥಿಗಳಿಂದ ಪ್ರತಿಭಟನೆ
Last Updated 19 ಜುಲೈ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅಂತಿಮ ಸೆಮಿಸ್ಟರ್‌ನ ಪರೀಕ್ಷೆಗಳನ್ನು ಕಡ್ಡಾಯವಾಗಿ ನಡೆಸಬೇಕು ಹಾಗೂ ಆಂತರಿಕ ಮೌಲ್ಯಮಾಪನ ನಡೆಸಬೇಕು ಎಂಬ ಯುಜಿಸಿ ಮಾರ್ಗಸೂಚಿ ರಾಜ್ಯದ ವಿಶ್ವವಿದ್ಯಾಲಯಗಳು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿ ಡಿಪ್ಲೊಮಾ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳ ರಾಜ್ಯ ಹೋರಾಟ ಸಮಿತಿಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

‘ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಪರೀಕ್ಷಾ ಮಾರ್ಗಸೂಚಿ ಹೊರಡಿಸಿದ್ದ ಯುಜಿಸಿ, ಅಂತಿಮ ಸೆಮಿಸ್ಟರ್‌ನ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು. ಉಳಿದ ಸೆಮಿಸ್ಟರ್‌ಗಳ ಪರೀಕ್ಷೆ ರದ್ದು ಮಾಡಿ, ಅವರನ್ನು ಆಂತರಿಕ ಮೌಲ್ಯಮಾಪನ ಅಥವಾ ಹಿಂದಿನ ಸೆಮಿಸ್ಟರ್‌ ಆಧಾರದ ಮೇಲೆ ಮೌಲ್ಯಮಾಪನ ನಡೆಸುವಂತೆ ಸಲಹೆ ನೀಡಿದೆ’ ಎಂದುಡಿಪ್ಲೊಮಾ ವಿದ್ಯಾರ್ಥಿಗಳ ರಾಜ್ಯ ಹೋರಾಟ ಸಮಿತಿಯ ಅಪೂರ್ವ ತಿಳಿಸಿದರು.

‘ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಮುಂದಿನ ವಾರದಿಂದ ಪರೀಕ್ಷೆಗಳನ್ನು ನಿಗದಿ ಮಾಡಲಾಗಿದೆ. ಯುಜಿಸಿ ಮಾರ್ಗಸೂಚಿಯನ್ನು ಡಿಪ್ಲೊಮಾಗೂ ಅನುಷ್ಠಾನಗೊಳಿಸಬೇಕು’ ಎಂದೂ ಆಗ್ರಹಿಸಿದರು.

ಎಐಡಿಎಸ್‌ಒ ಕಾರ್ಯದರ್ಶಿ ಅಜಯ್ ಕಾಮತ್,‘ಯುಜಿಸಿ ಮಾರ್ಗಸೂಚಿ ಹೊರಡಿಸಿದ್ದರೂ ಉಳಿದ ಸೆಮಿಸ್ಟರ್‌ಗಳ ಪರೀಕ್ಷೆ ನಡೆಸುವುದು ಅವೈಜ್ಞಾನಿಕ ಮತ್ತು ಕಾನೂನುಬಾಹಿರ. ಸೂಚಿತ ಅಂಶಗಳನ್ನುತಾಂತ್ರಿಕ ಶಿಕ್ಷಣ ನಿರ್ದೇಶನಾಲಯ ರಾಜ್ಯದಲ್ಲಿ ಅನುಷ್ಠಾನಕ್ಕೆ ತರಬೇಕು.ಎಲ್ಲ ವಿದ್ಯಾರ್ಥಿಗಳಿಗೆ ಎರಡೂ ಲಸಿಕೆ ಪೂರ್ಣಗೊಂಡ ನಂತರ ಭೌತಿಕ ತರಗತಿಗಳನ್ನು ಆರಂಭಿಸಬೇಕು’ ಎಂದರು.

‘ಯುಜಿಸಿ ಮಾರ್ಗದರ್ಶನದ ಬಗ್ಗೆ ಎರಡು ದಿನಗಳಲ್ಲಿ ಚರ್ಚೆ ನಡೆಸಿ, ರಾಜ್ಯದಲ್ಲಿ ಅನುಷ್ಠಾನ ತರಲಾಗುವುದು ಹಾಗೂ ಸುತ್ತೋಲೆ ಹೊರಡಿಸಲಾಗುವುದು’ ಎಂದುತಾಂತ್ರಿಕ ಶಿಕ್ಷಣ ನಿರ್ದೇಶನಾಲಯದನಿರ್ದೇಶಕಮಂಜುನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT