ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೈಕಸ್‌ ಕ್ಯೂರಿಗೆ ಮಾಹಿತಿ ಒದಗಿಸಲು ನಿರ್ದೇಶನ

Last Updated 14 ಮಾರ್ಚ್ 2023, 23:03 IST
ಅಕ್ಷರ ಗಾತ್ರ

ಬೆಂಗಳೂರು: ‘ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಕರಣದಲ್ಲಿ ಅಮೈಕಸ್ ಕ್ಯೂರಿಯಾದ (ಕೋರ್ಟ್‌ಗೆ ಸಹಕರಿಸುವ ವಕೀಲ) ಹಿರಿಯ ವಕೀಲ ಕೆ.ಎನ್‌. ಫಣೀಂದ್ರ ಅವರು ಕೋರುವ ಮಾಹಿತಿಯನ್ನು ಎರಡು ವಾರಗಳಲ್ಲಿ ಒದಗಿಸಿ’ ಎಂದು ಹೈಕೋರ್ಟ್‌, ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶಿಸಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಸಂಬಂಧ ಹೈಕೋರ್ಟ್ 2013ರಲ್ಲಿ ದಾಖಲಿಸಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ಶಾಲೆ ಬಿಟ್ಟ ಮಕ್ಕಳ ಅಂಕಿಅಂಶ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಅಮೈಕಸ್‌ ಕ್ಯೂರಿ ಅವರಿಗೆ ನೀಡಿ’ ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್‌ 6ಕ್ಕೆ ಮುಂದೂಡಿದೆ.

‘ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ 24 ಸಾವಿರಕ್ಕೂ ಅಧಿಕ ಮಕ್ಕಳಲ್ಲಿ 21,407 ಮಕ್ಕಳನ್ನು ಗುರುತಿಸಲಾಗಿದೆ ಹಾಗೂ 6 ರಿಂದ 14 ವರ್ಷದ 17,266 ಮಕ್ಕಳನ್ನು ಶಾಲೆಗೆ ಮರಳಿ ದಾಖಲಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಈ ಹಿಂದಿನ ವಿಚಾರಣೆ ವೇಳೆ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT