ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಿರ್ದೇಶಕ ನಾಗಶೇಖರ್ ಕಾರು ಅಪಘಾತ, ಮಹಿಳೆಗೆ ಗಾಯ

Published : 6 ಸೆಪ್ಟೆಂಬರ್ 2024, 16:15 IST
Last Updated : 6 ಸೆಪ್ಟೆಂಬರ್ 2024, 16:15 IST
ಫಾಲೋ ಮಾಡಿ
Comments

ಬೆಂಗಳೂರು: ಚಿತ್ರ ನಿರ್ದೇಶಕ ನಾಗಶೇಖರ್ ಅವರು ಚಾಲನೆ ಮಾಡುತ್ತಿದ್ದ ಬೆಂಜ್‌ ಕಾರು ಅಪಘಾತವಾಗಿದ್ದು, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಗಶೇಖರ್ ಅವರು ತಮ್ಮ ಕಾರು ಚಾಲನೆ ಮಾಡಿಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ ಬಸ್‌ ತಂಗುದಾಣದಲ್ಲಿ ನಿಂತಿದ್ದ ದೊಡ್ಡಗೊಲ್ಲರಹಟ್ಟಿ ನಿವಾಸಿ ಲಕ್ಷ್ಮೀ ಎಂಬುವವರಿಗೆ ಡಿಕ್ಕಿ ಹೊಡೆದು, ಬಳಿಕ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು, ನಾಗಶೇಖರ್‌ಗೆ ಸಣ್ಣಪುಟ್ಟ ಗಾಯವಾಗಿದೆ.

‘ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯನ್ನು ನಾಗಶೇಖರ್‌ ಅವರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಠಾಣೆಗೆ ಬಂದು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಮೈನಾ, ಸಂಜು ವೆಡ್ಸ್ ಗೀತಾ, ಅರಮನೆ​​ ಹಾಗೂ ಮಾಸ್ತಿಗುಡಿ ಸೇರಿದಂತೆ ಹಲವು ಚಿತ್ರಗಳನ್ನು ನಾಗಶೇಖರ್ ನಿರ್ದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT