ಬೆಂಗಳೂರು: ನಟರಾದ ಶಿವರಾಜ್ಕುಮಾರ್ ಹಾಗೂ ಸುದೀಪ್ ಅಭಿನಯದಲ್ಲಿ ತೆರೆಕಂಡಿರುವ ‘ವಿಲನ್’ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ಗಳು ಹರಿದಾಡುತ್ತಿವೆ. ಅದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ನಿರ್ದೇಶಕ ಪ್ರೇಮ್, ಪೊಲೀಸರಿಗೆ ಮಂಗಳವಾರ ದೂರು ನೀಡಿದ್ದಾರೆ.

ಪಶ್ಚಿಮ ವಿಭಾಗದ ಡಿಸಿಪಿ ರವಿ ಚನ್ನಣ್ಣನವರ ಅವರ ಕಚೇರಿಗೆ ಹೋಗಿದ್ದ ಪ್ರೇಮ್, ‘ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಿ’ ಎಂದು ಒತ್ತಾಯಿಸಿ ದೂರಿನ ಪ್ರತಿ ನೀಡಿದರು.

‘ಸಿನಿಮಾವನ್ನು ಸಿನಿಮಾ ಥರ ನೋಡದ ಕೆಲವು ಕಿಡಿಗೇಡಿಗಳು, ವೈಯಕ್ತಿಕವಾಗಿ ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿದ್ದಾರೆ. ಅದಕ್ಕೆ ಸಂಬಂಧಪಟ್ಟ ವಿಡಿಯೊಗಳು ಜೊತೆಗಿವೆ’ ಎಂದು ಪ್ರೇಮ್ ದೂರಿನಲ್ಲಿ ಹೇಳಿಕೊಂಡಿದ್ದಾರೆ.

ಡಿಸಿಪಿ ಕಚೇರಿಯಿಂದ ಹೊರಬಂದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪ್ರೇಮ್, ‘ಕೆಲವರು, ಅಭಿಮಾನಿಗಳ ಸೋಗಿನಲ್ಲಿ ಅತಿರೇಕವಾಗಿ ವರ್ತಿಸುತ್ತಿದ್ದಾರೆ. ವೈಯಕ್ತಿಕವಾಗಿ ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ ಅಸಭ್ಯವಾಗಿ ಮಾತನಾಡುತ್ತಿದ್ದಾರೆ. ಅಂಥ ವಿಕೃತ ಮನಸ್ಸುಳ್ಳವರ ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದೇನೆ’ ಎಂದರು.

‘ಸಿನಿಮಾ ಬಿಟ್ಟು ವೈಯುಕ್ತಿಕವಾಗಿ ಮಾತನಾಡುವುದು ಸರಿಯಲ್ಲ. ಸಿನಿಮಾರಂಗದಲ್ಲಿ ಕಾಲು ಎಳೆಯುವವರು ಇದ್ದೇ ಇರುತ್ತಾರೆ. ಅವರಿಂದಲೇ ಇಷ್ಟೆಲ್ಲ ಆಗುತ್ತಿದೆ. ಅಂಥವರ ವಿರುದ್ಧವೇ ದೂರು ನೀಡಿದ್ದೇನೆ. ಕ್ರಮ ಕೈಗೊಳ್ಳುವ ಭರವಸೆಯನ್ನೂ ಡಿಸಿಪಿಯವರು ಕೊಟ್ಟಿದ್ದಾರೆ’ ಎಂದು ಪ್ರೇಮ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.