ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಅನಾಹುತ ತಪ್ಪಿಸುವ ಉದ್ದೇಶದಿಂದ ವಿಪತ್ತು ನಿರ್ವಹಣಾ ತಂಡಗಳನ್ನು ರಚಿಸಲಾಗಿದೆ.8 ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಲಯ ವಿಶೇಷ ಆಯುಕ್ತರನ್ನು ಆಯಾ ತಂಡದ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಬಿಬಿಎಂಪಿ, ಅರಣ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕ ವಿಭಾಗ, ಜಲಮಂಡಳಿ ಹಾಗೂ ಸಂಚಾರಿ ವಿಭಾಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿರುತ್ತಾರೆ.

ಮಳೆ ಬಂದಾಗ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು, ವಿದ್ಯುತ್ ಕಂಬಗಳು ಮುರಿದು ಬೀಳುವುದು, ಮ್ಯಾನ್‌ಹೋಲ್‌ಗಳು ತೆರೆದುಕೊಳ್ಳುವುದು ಹಾಗೂ ಮರ ಬೀಳುವುದು ಮುಂತಾದ ಅವಘಡ ನಡೆದರೆ ಆಸ್ತಿಪಾಸ್ತಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ತಡೆಯುವ ಹೊಣೆ ಈ ತಂಡಗಳ ಮೇಲಿದೆ. ಮಳೆಯಿಂದಾಗುವ ಅನಾಹುತಗಳನ್ನು ತಡೆಗಟ್ಟಲು ಬಿಬಿಎಂಪಿ, ಅರಣ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕ ವಿಭಾಗ, ಜಲಮಂಡಳಿ ಹಾಗೂ ಸಂಚಾರ ಪೊಲೀಸ್ ವಿಭಾಗದಲ್ಲೂ ವಲಯವಾರು ತಂಡಗಳನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.