ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಕಾರ್ಮಿಕ ಸಂಘಟನೆಗಳ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಿ‘

ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಫೆಡರೇಶನ್‌ ಒತ್ತಾಯ
Published 1 ಜೂನ್ 2024, 15:52 IST
Last Updated 1 ಜೂನ್ 2024, 15:52 IST
ಅಕ್ಷರ ಗಾತ್ರ

ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳೊಂದಿಗೆ ಚರ್ಚಿಸಿ ಕಾರ್ಮಿಕರ ಕುಂದುಕೊರತೆಗಳನ್ನು ಬಗೆಹರಿಸಬೇಕು ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಫೆಡರೇಶನ್‌ ಆಗ್ರಹಿಸಿದೆ.

ಫೆಡರೇಷನ್‌ನ ಕೇಂದ್ರ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ಬಗ್ಗೆ ವಿವಿಧ ನಿರ್ಣಯಗಳನ್ನು ಕೈಗೊಂಡಿದೆ.

ವಿವಿಧ ನಿಗಮಗಳು, ವಿಭಾಗ ಮಟ್ಟದಲ್ಲಿ, ಘಟಕಗಳ ಮಟ್ಟದಲ್ಲಿ ಮಾತ್ರವಲ್ಲದೇ ಕೇಂದ್ರ ಮಟ್ಟದಲ್ಲಿಯೂ ಸಂಘಟನೆಗಳೊಂದಿಗೆ ಸಭೆ ನಡೆಸಬೇಕು. ವೇತನ ಸಮಸ್ಯೆ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಶಕ್ತಿ ಯೋಜನೆಯಿಂದ ನೌಕರರಿಗೆ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಬೇಕು. ತಾಂತ್ರಿಕ ಸಿಬ್ಬಂದಿಗೆ ಪ್ರೋತ್ಸಾಹಧನ ಕೊಡಬೇಕು ಎಂದು ಒತ್ತಾಯಿಸಲಾಯಿತು.

ಫಾರಂ–4 ಅನ್ನು ಕಾನೂನು, ಒಪ್ಪಂದಗಳಿಗೆ ಅನುಗುಣವಾಗಿ ಪುನರ್‌ರಚಿಸಬೇಕು. ಸಿಬ್ಬಂದಿ ನೇಮಿಸಬೇಕು. ಕೆಎಸ್‌ಆರ್‌ಟಿಸಿಯಲ್ಲಿ ಅನುಕಂಪ ಆಧಾರಿತ ನೇಮಕಾತಿ ಮೂಲಕ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಲಾಯಿತು.

ಬೇಡಿಕೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸದಿದ್ದರೆ ಜಂಟಿ ಕ್ರಿಯಾ ಸಮಿತಿಯು ಹಮ್ಮಿಕೊಳ್ಳುವ ಎಲ್ಲ ಚಳವಳಿಗಳಲ್ಲಿ ನೌಕರರು ಪಾಲ್ಗೊಳ್ಳಬೇಕು ಎಂದು ಕರೆ ನೀಡಲಾಯಿತು ಎಂದು ಫೆಡರೇಶನ್‌ ಅಧ್ಯಕ್ಷ ಎಚ್‌.ವಿ.ಅನಂತಸುಬ್ಬರಾವ್‌ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT