ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಗೆ ಜೆಡಿಎಸ್‌ ಸಜ್ಜುಗೊಳಿಸಲು ಚರ್ಚೆ

Published 27 ಡಿಸೆಂಬರ್ 2023, 19:13 IST
Last Updated 27 ಡಿಸೆಂಬರ್ 2023, 19:13 IST
ಅಕ್ಷರ ಗಾತ್ರ

ಬೆಂಗಳೂರು: ಪದವೀಧರ, ಶಿಕ್ಷಕರ ಕ್ಷೇತ್ರಗಳು, ಬಿಬಿಎಂಪಿ ಹಾಗೂ ಲೋಕಸಭೆ ಚುನಾವಣೆಗಾಗಿ ಪಕ್ಷವನ್ನು ಸಜ್ಜುಗೊಳಿಸಲು, ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಬುಧವಾರ ನಡೆದ ಜೆಡಿಎಸ್‌ ಮುಖಂಡರ ಸಭೆ ನಿರ್ಧರಿಸಿತು. 

ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ  ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಗೊಟ್ಟಿಗೆರೆ ಮಂಜಣ್ಣ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. 

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷರಾಗಿ ಎಂ.ನಾಗೇಂದ್ರ ಪ್ರಸಾದ್‌ (ಬಾಬು) ಅವರನ್ನು ನೇಮಕ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT