ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ. 24ರಂದು ದಿಶಾ ಭಾರತ್‌ ‘ಸಂಭ್ರಮ’ ಕಾರ್ಯಕ್ರಮ

Published 22 ಫೆಬ್ರುವರಿ 2024, 20:33 IST
Last Updated 22 ಫೆಬ್ರುವರಿ 2024, 20:33 IST
ಅಕ್ಷರ ಗಾತ್ರ

ಬೆಂಗಳೂರು: ‘ದಿಶಾ ಭಾರತ್‌ ಸಂಸ್ಥೆಯ 20ನೇ ವಾರ್ಷಿಕೋತ್ಸವದ ಅಂಗವಾಗಿ ಇದೇ 24ರಂದು ‘ಸಂಭ್ರಮ’ ಎಂಬ ಕಾರ್ಯಕ್ರಮವನ್ನು ಆರ್‌.ವಿ. ಟೀಚರ್ಸ್‌ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ 2024ರಲ್ಲಿ ಸಂಸ್ಥೆ ಹಮ್ಮಿಕೊಳ್ಳುವ ವಿವಿಧ ಕಾರ್ಯಕ್ರಮಗಳಿಗೂ ಚಾಲನೆ ನೀಡಲಾಗುವುದು’ ಎಂದು ದಿಶಾ ಭಾರತ್‌ ಸಂಸ್ಥಾಪಕಿ ರೇಖಾ ರಾಮಚಂದ್ರನ್ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ಎರಡು ದಶಕಗಳಲ್ಲಿ ದಿಶಾ ಭಾರತ್‌ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳು, ನಾಯಕತ್ವದ ಗುಣಗಳು ಮತ್ತು ಜೀವನ ಕೌಶಲಗಳು, ಸಮಾಜಕ್ಕೆ ಧನಾತ್ಮಕವಾಗಿ ಕೊಡುಗೆ ನೀಡುವ ಜವಾಬ್ದಾರಿಯುತ ನಾಗರಿಕರನ್ನು ಬೆಳೆಸುವ ಉದ್ದೇಶ ಹೊಂದಿದೆ. ತಿಂಗಳ ಉಪನ್ಯಾಸ ಮಾಲಿಕೆ, ಶಿಕ್ಷಣ ತಜ್ಞರ ವಿಚಾರಗೋಷ್ಠಿ, ಯುವ ಸಮಾವೇಶ, ಎನ್‌ಎಸ್‌ಎಸ್‌ ಸಂಯೋಜಕರ ಸಮಾಗಮ, ಮೇರಾ ಭಾರತ್‌ ಮಹಾನ್ ಎಂಬ ರಾಜ್ಯಮಟ್ಟದ ರಸಪ್ರಶ್ನೆ ಹಮ್ಮಿಕೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.

ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ. ಜಗದೀಶ ಕುಮಾರ್, ಶಿಕ್ಷಣ ತಜ್ಞ ಗುರುರಾಜ ಕರಜಗಿ, ಐಐಎಂಬಿ ಪ್ರಾಧ್ಯಾಪಕ ಮಹಾದೇವನ್‌ ಅವರು ‘ಸಂಭ್ರಮ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT