ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ ಬೋಗಿಗಳ ಸೋಂಕುಮುಕ್ತಿಗೆ ಕ್ರಮ

Last Updated 9 ಮಾರ್ಚ್ 2020, 18:50 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕೋವಿಡ್ 19 ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಮೆಟ್ರೊ ಬೋಗಿಗಳನ್ನು ನಿಯಮಿತವಾಗಿಸೋಂಕು ಮುಕ್ತಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಬೆಂಗಳೂರು ಮೆಟ್ರೊ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಸೇಠ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಮೆಟ್ರೊ ರೈಲಿನ ಬೋಗಿಗಳಲ್ಲಿ ಪ್ರಯಾಣಿಕರ ಕರಸ್ಪರ್ಶ ಹೆಚ್ಚಾಗಿ ಆಗುವ ಹ್ಯಾಂಡಲ್‌ಗಳು, ಬಾಗಿಲು, ನಿಲ್ದಾಣಗಳ ಲಿಫ್ಟ್‌ನ ಸ್ವಿಚ್‌ಗಳನ್ನು ಸೋಂಕು ಮುಕ್ತ ದ್ರಾವಣದಿಂದ ಸ್ವಚ್ಛಗೊಳಿಸಲಾಗುತ್ತಿದೆ. ಸೋಮವಾರ ನಗರದಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆಯನ್ನು ಇನ್ನಷ್ಟು ವ್ಯವಸ್ಥಿತವಾಗಿ ನಿರ್ವಹಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ದೆಹಲಿ: ಸಾರ್ವಜನಿಕ ಸಾರಿಗೆ ಸ್ವಚ್ಛತೆಗೆ ಆದ್ಯತೆ

ಕೋವಿಡ್ 19 ದೃಢಪಟ್ಟ ಹಿನ್ನೆಲೆಯಲ್ಲಿದೆಹಲಿಯಲ್ಲಿ ಮೆಟ್ರೊ ರೈಲುಗಳು ಮತ್ತು ನಗರ ಸಾರಿಗೆ ಬಸ್‌ಗಳನ್ನು ನಿಯಮಿತವಾಗಿ ಸೋಂಕು ಮುಕ್ತಗೊಳಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಸರ್ಕಾರವು ಪ್ರಕಟಣೆಯಲ್ಲಿ ತಿಳಿಸಿದೆ.

ಮೆಟ್ರೊ ರೈಲಿನ ಎಲ್ಲ ಬೋಗಿಗಳು ಮತ್ತು ಸಾರ್ವಜನಿಕ ಸಾರಿಗೆಗೆ ಬಳಕೆಯಾಗುವ ಬಸ್‌ಗಳನ್ನು ಸೋಂಕು ನಿವಾರಕಗಳನ್ನು ಬಳಸಿ ಶುಚಿಗೊಳಿಸಲಾಗುತ್ತಿದೆ. ಸಾರಿಗೆ ಸಚಿವ ಕೈಲಾಶ್ ಗೆಹ್ಲಾಟ್ ಸೋಂಕು ನಿವಾರಣೆಯ ಬಗ್ಗೆ ಖುದ್ದು ಗಮನ ಹರಿಸುತ್ತಿದ್ದಾರೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT