ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿದ್ದರಾಮಯ್ಯ ಅವರನ್ನು ವಜಾಗೊಳಿಸಿ’

ಚಿಲುಮೆ ನೇಮಿಸಿಕೊಂಡಿದ್ದು ಯಾರು: ಕಾಂಗ್ರೆಸ್‌ಗೆ ಪ್ರಶ್ನೆ
Last Updated 24 ನವೆಂಬರ್ 2022, 20:09 IST
ಅಕ್ಷರ ಗಾತ್ರ

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಮತ್ತು ಕಾಂಗ್ರೆಸ್‌ ಮುಖಂಡರಿಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

‘ಚಿಲುಮೆ ಸಂಸ್ಥೆಯನ್ನು 2017ರಲ್ಲಿ ಕಾನೂನುಬಾಹಿರವಾಗಿ ನೇಮಿಸಿಕೊಂಡಿದ್ದು ಯಾರು ಸಿದ್ದರಾಮಯ್ಯನವರೇ? ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೂ, ಸರ್ಕಾರಕ್ಕೂ ಸಂಬಂಧವಿಲ್ಲ ಎಂಬ ಜ್ಞಾನವಿಲ್ಲವೇ ಕಾಂಗ್ರೆಸ್‌ ನಾಯಕರೇ? ಮತದಾರರ ಪಟ್ಟಿ ಪರಿಷ್ಕರಣೆ ಮಾಡುವುದು ಚುನಾವಣಾ ಆಯೋಗದ ಕೆಲಸ ಎಂಬ ಸಣ್ಣ ವಿಷಯವು ತಿಳಿಯುವುದಿಲ್ಲ’ ಎಂದು ಪ್ರಶ್ನಿಸಿದ್ದಾರೆ.

‘ಅಕ್ರಮ ನಡೆದಿದ್ದರೆ ಸಿದ್ದರಾಮಯ್ಯ ಅವರೇ ಮಾಡಿರುವ ಅಕ್ರಮ ನೇಮಕಾತಿಗಳ ಫಲವಾಗಿದೆ. ಅಂದರೆ, ಕಿಂಗ್‌ಪಿನ್ ಸಿದ್ದರಾಮಯ್ಯನವರೇ ಅಲ್ಲವೇ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

‘ಅಕ್ರಮದ ಮಾಹಿತಿ ಬಂದ ತಕ್ಷಣ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ತನಿಖೆಯಲ್ಲಿ ಸಿದ್ದರಾಮಯ್ಯ ಅವರ ಮತ್ತು ಚಿಲುಮೆ ಸಂಸ್ಥೆಯ ಅಕ್ರಮಗಳು ಬೆಳಕಿಗೆ ಬರುತ್ತಿವೆ. ಅದಕ್ಕೆ ಅಲ್ಲವೇ ನಿಮಗೆ ಈ ತಳಮಳವಾಗುತ್ತಿದೆ’ ಎಂದು ಹೇಳಿದರು.

‘ರಣದೀಪ್‌ ಸುರ್ಜೆವಾಲಾ ಅವರೇ, ನೈತಿಕತೆಯಿದ್ದರೆ ವಿರೋಧಪಕ್ಷದ ನಾಯಕ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ವಜಾಗೊಳಿಸಿ’ ಎಂದು ರವಿಕುಮಾರ್‌ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT