ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಚೆ ಮೂಲಕ ಮತದಾರರ ಗುರುತಿನ ಚೀಟಿ ರವಾನೆ

Published 23 ನವೆಂಬರ್ 2023, 16:04 IST
Last Updated 23 ನವೆಂಬರ್ 2023, 16:04 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ನೋಂದಣಿಗೆ ವಿಶೇಷ ಅಭಿಯಾನ ನಗರದಲ್ಲಿ ನಡೆಯುತ್ತಿದೆ ಎಂದು ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ತಿಳಿಸಿದರು.

ಮತದಾರರ ಅಂತಿಮ ಪಟ್ಟಿಯನ್ನು ಜ.5ರಂದು ಪ್ರಕಟಿಸಲಾಗುವುದು. 28 ವಿಧಾನಸಭೆ ಕ್ಷೇತ್ರಗಳ ಮತದಾರರ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ವಿತರಿಸಲಾಗುತ್ತಿದೆ. ಬೆಂಗಳೂರು ಕೇಂದ್ರದಲ್ಲಿ 44 ಸಾವಿರ, ಬೆಂಗಳೂರು ಉತ್ತರದಲ್ಲಿ 52 ಸಾವಿರ, ಬೆಂಗಳೂರು ದಕ್ಷಿಣದಲ್ಲಿ 42 ಸಾವಿರ ಹಾಗೂ ಬೆಂಗಳೂರು ನಗರದಲ್ಲಿ 97 ಸಾವಿರ ಮತದಾರರ ಗುರುತಿನ ಚೀಟಿಗಳನ್ನು ವಿತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ 15 ದಿನಗಳಲ್ಲಿ ಎಲ್ಲರಿಗೂ ಮತದಾರರ ಗುರುತಿನ ಚೀಟಿ ತಲುಪಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾಹಿತಿ ನೀಡಿದರು.

ಯುವ ಮತದಾರರಲ್ಲಿ ಮನವಿ: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ 18 ವರ್ಷ ತುಂಬಿದ ಯುವ ಮತದಾರರು ಸ್ವಯಂಪ್ರೇರಿತವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಬೇಕು. ಇತರರ ಹೆಸರನ್ನೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಸಲು ಪ್ರೇರಣೆ ನೀಡಬೇಕು ಎಂದು ಹೇಳಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್‌, ಬಿಬಿಎಂಪಿ ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಅಜಯ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT