ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಮಾರ್ಗದಲ್ಲಿನ ಟಿ.ಕೆ. ಹಳ್ಳಿಯಲ್ಲಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 19ರಂದು ಬೆಳಿಗ್ಗೆ 6ರಿಂದ ಮರುದಿನ ಬೆಳಿಗ್ಗೆ 6ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಟಿ.ಕೆ. ಹಳ್ಳಿಯ ಕಾವೇರಿ 5ನೇ ಹಂತದ ಕೊಳವೆ ಮಾರ್ಗದಲ್ಲಿ ಹೊಸದಾಗಿ 3,000 ಮಿ.ಮೀ. ವ್ಯಾಸದ ಕೊಳವೆ ಜೋಡಣೆ ಮಾಡುವ ಕಾಮಗಾರಿ ನಡೆಯಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೂಡ ಕೈಗೆತ್ತಿಕೊಳ್ಳಲಾಗಿದೆ. ಇದರಿಂದಾಗಿ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ - 5ರ ಎಲ್ಲ ಯಂತ್ರಾಗಾರಗಳನ್ನು ಅಂದು ಸ್ಥಗಿತಗೊಳಿಸಲು ಸಕ್ಷಮ ಪ್ರಾಧಿಕಾರ ಅನುಮತಿ ನೀಡಿದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.