ಬುಧವಾರ, ನವೆಂಬರ್ 25, 2020
18 °C

ಪ್ರಚಾರಕ್ಕೆ ಅಡ್ಡಿ: ಬಿಜೆಪಿ ಮುಖಂಡನ ಬಂಧನ, ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರಿಗೆ ಚುನಾವಣಾ ಪ್ರಚಾರದ ವೇಳೆ ಅಡ್ಡಿಪಡಿಸಿದ ಆರೋಪದಡಿ ಯಶವಂತಪುರದ ಮಾಜಿ ಕಾರ್ಪೊರೇಟರ್ ಬಿ.ಕೆ.ವೆಂಕಟೇಶ್ ಅವರನ್ನು ಯಶವಂತಪುರ ಪೊಲೀಸರು ಬಂಧಿಸಿ,
ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.

ರಾಜರಾಜೇಶ್ವರಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್. ಅವರ ಪರ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚಾಮುಂಡೇಶ್ವರಿ ಬಸ್ ನಿಲ್ದಾಣದ ಬಳಿ ಮಂಗಳವಾರ ನಡೆದ ರೋಡ್‍ಶೋ ಹಾಗೂ ಚುನಾವಣಾ ಪ್ರಚಾರ ನಡೆಯಿತು.

ಈ ವೇಳೆ ಬಿಜೆಪಿ ಯುವ ಮೋರ್ಚಾ ಸದಸ್ಯರೊಂದಿಗೆ ಬಂದಿದ್ದ ವೆಂಕಟೇಶ್, ಬಿಜೆಪಿ ಪರ ಘೋಷಣೆಗಳನ್ನು ಕೂಗಿ ಪ್ರಚಾರಕ್ಕೆ ಅಡ್ಡಿಪಡಿಸಿ, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಬಿ.ಕೆ.ಕೃಷ್ಣ ಅವರು ದೂರು ದಾಖಲಿಸಿದ್ದರು. ಇದರನ್ವಯ ವೆಂಕಟೇಶ್ ವಿರುದ್ಧ ಕ್ರಮ ಜರುಗಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.