ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಜೆಡಿಎಸ್ ಘಟಕದ ವತಿಯಿಂದ ಹೆಗಡೆನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ರಂಜಾನ್ ಹಬ್ಬದ ಪ್ರಯುಕ್ತ ಅಲ್ಪಸಂಖ್ಯಾತ ಕುಟುಂಬಗಳಿಗೆ 5 ಸಾವಿರ ದಿನಸಿ ಕಿಟ್ ವಿತರಿಸಿದರು.

ಈ ವೇಳೆ ಮಾತನಾಡಿದ ಅವರು, ‘ಎಲ್ಲ ಜಾತಿ-ಧರ್ಮದ ಜನರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಪಕ್ಷದ ಆದ್ಯತೆ ಆಗಿದೆ. ರಂಜಾನ್, ಮುಸಲ್ಮಾನರಿಗೆ ಪವಿತ್ರವಾದ ಹಬ್ಬವಾಗಿದ್ದು, ಒಂದು ತಿಂಗಳ ಕಾಲ ಉಪವಾಸ ಮತ್ತು ಅನ್ನದ ಮಹತ್ವ ತಿಳಿಸುವ ಸಲುವಾಗಿ ಈ ಆಚರಣೆಯನ್ನು ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಇರುವವರು ಇಲ್ಲದವರಿಗೆ ನೀಡುವ ಪದ್ಧತಿಯಿದೆ’ ಎಂದರು.

ಬೆಂಗಳೂರು ಮಹಾನಗರ ಜಾತ್ಯತೀತ ಜನತಾದಳದ ಅಧ್ಯಕ್ಷ ಆರ್.ಪ್ರಕಾಶ್, ಬ್ಯಾಟರಾಯನಪುರ ಕ್ಷೇತ್ರದ ಅಧ್ಯಕ್ಷ ಎನ್.ವೇಣುಗೋಪಾಲ್, ಮುಖಂಡರಾದ ಟಿ.ಎ.ಶರವಣ, ಚೌಡರೆಡ್ಡಿ ತೂಪಲ್ಲಿ, ಟಿ.ಎನ್. ಹರೀಶ್ ಕುಮಾರ್, ಎಂ.ಖಲೀಲ್ ಉಲ್ಲಾ, ಸೈಯದ್ ಅನೀಫ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.