ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

81,582 ಕುಟುಂಬಕ್ಕೆ 27ರಂದು ಹಕ್ಕುಪತ್ರ ವಿತರಣೆ: ಅಶೋಕ

Last Updated 23 ಮಾರ್ಚ್ 2023, 22:53 IST
ಅಕ್ಷರ ಗಾತ್ರ

ಬೆಂಗಳೂರು:‌ ‘ಗೊಲ್ಲರಹಟ್ಟಿ, ಕುರುಬರ ದೊಡ್ಡಿಗಳಲ್ಲಿ ವಾಸ ಮಾಡುವ 81,582 ಕುಟುಂಬಗಳಿಗೆ ಇದೇ 27ರಂದು ಹಕ್ಕುಪತ್ರ ವಿತರಿಸಲಾಗುವುದು’ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಜಿಲ್ಲಾಧಿಕಾರಿಗಳ ಜೊತೆ ಗುರುವಾರ ವಿಡಿಯೊ ಸಂವಾದ ನಡೆಸಿದ ಬಳಿಕ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 11 ಗಂಟೆಗೆ 23 ಜಿಲ್ಲೆಗಳ ಫಲಾನುಭವಿಗಳಿಗೆ ಹಕ್ಕುಪತ್ರ‌ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.

‌‘ಅಂದು ಚಿಕ್ಕಬಳ್ಳಾಪುರದಲ್ಲಿ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವ ಮನ್‌ಸುಖ್‌ ಮಾಂಡವೀಯ, ಸಚಿವ ಡಾ. ಸುಧಾಕರ್ ಉಪಸ್ಥಿತರಿರಲಿದ್ದಾರೆ. ಅದೇ ದಿನ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕುಗಳಲ್ಲಿ ಹಕ್ಕುಪತ್ರ ನೀಡಲಾಗುವುದು. ‘ಈವರೆಗೆ 1,672 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮ ಎಂದು ಘೋಷಿಸಲಾಗಿದೆ. 2,488 ಪ್ರದೇಶಗಳ ಘೋಷಣೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಆ ಮೂಲಕ, 81 ಸಾವಿರಕ್ಕೂ ಹೆಚ್ಚು ಜನರಿಗೆ ಒಂದೇ ದಿನದಲ್ಲಿ ಹಕ್ಕುಪತ್ರ ನೀಡಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT