ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿ: ಚಾಲನೆ ಇಂದು

Last Updated 22 ಜೂನ್ 2021, 22:25 IST
ಅಕ್ಷರ ಗಾತ್ರ

ಬೆಂಗಳೂರು: ಉನ್ನತ ಶಿಕ್ಷಣ ಕಲಿಕೆಯಲ್ಲಿ ‘ಕಲಿಕಾ ನಿರ್ವಹಣಾ ವ್ಯವಸ್ಥೆ’ಗೆ (ಎಲ್‌ಎಂಎಸ್‌) ಪೂರಕವಾಗುವಂತೆ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಿಸುವ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಚಾಲನೆ ನೀಡಲಿದ್ದಾರೆ.

‘ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ಹಾಗೂ ಡಿಜಿಟಲ್‌ ಅಂತರ ಅಳಿಸಿ ಹಾಕುವ ಉದ್ದೇಶದಿಂದ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಿಸಲಾಗುತ್ತಿದೆ. ಜೊತೆಗೆ, ಸರ್ಕಾರಿ ಕಾಲೇಜುಗಳಲ್ಲಿ 2,500 ಸ್ಮಾರ್ಟ್‌ ಕ್ಲಾಸ್‌ ರೂಂಗಳಿಗೂ ಚಾಲನೆ ನೀಡಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು.

‘ಈ ಯೋಜನೆಗೆ ಉನ್ನತ ಶಿಕ್ಷಣ ಇಲಾಖೆಯ ಜತೆಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳೂ ಕೈಜೋಡಿಸಿವೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಸಾಂಕೇತಿಕವಾಗಿ ಟ್ಯಾಬ್ಲೆಟ್‌ ಪಿಸಿಗಳನ್ನು ಮುಖ್ಯಮಂತ್ರಿ ವಿತರಿಸುವರು’ ಎಂದರು.

‘ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಮತ್ತು 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಲಿಯುತಿರುವ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡಲಾಗುವುದು. ಈ ಯೋಜನೆಗೆ ₹ 163 ಕೋಟಿ ವೆಚ್ಚ ತಗಲಿದೆ’ ಎಂದರು.

‘ಕೋವಿಡ್‌ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಈ ಟ್ಯಾಬ್ಲೆಟ್‌ ಪಿಸಿಗಳ ಮೂಲಕ ಎಲ್‌ಎಂಎಸ್‌ ವ್ಯವಸ್ಥೆಯಲ್ಲಿ ಕಲಿಕೆ ಮುಂದುವರಿಸಬಹುದು. ಈ ಟ್ಯಾಬ್ಲೆಟ್‌ಗಳು ಕಲಿಕೆಗೆ ಬೇಕಾದ ಎಲ್ಲ ಫೀಚರ್‌ಗಳನ್ನು ಒಳಗೊಂಡಿವೆ. ವೈಫೈ, ಸಿಮ್‌ ಬಳಕೆಯಿಂದ ಅವುಗಳಿಗೆ ಇಂಟರ್‌ನೆಟ್‌ ಸಂಪರ್ಕ ಕಲ್ಪಿಸಬಹುದು. ವೈಫೈ ಲಭ್ಯತೆ ಇಲ್ಲದ ಕಡೆಗಳಲ್ಲಿ ಸಿಮ್‌ ಬಳಕೆಯ ಮೂಲಕವೇ ಆನ್‌ಲೈನ್‌ ತರಗತಿಯಲ್ಲಿ ಪಾಲ್ಗೊಳ್ಳಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT