ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಿಟ್ಟ ಮಹಿಳೆ’ ಪ್ರಶಸ್ತಿ ಪ್ರದಾನ ಮಾರ್ಚ್ 7

Published 5 ಮಾರ್ಚ್ 2024, 15:35 IST
Last Updated 5 ಮಾರ್ಚ್ 2024, 15:35 IST
ಅಕ್ಷರ ಗಾತ್ರ

ಬೆಂಗಳೂರು: ಅಂತರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ‘ದಿಟ್ಟ ಮಹಿಳೆ’ ಪ್ರಶಸ್ತಿಯನ್ನು ಮಾರ್ಚ್ 7ರಂದು ಪ್ರದಾನ ಮಾಡಲಾಗುತ್ತಿದೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಡಾ. ರಾಜ್‌ಕುಮಾರ್‌ ಗಾಜಿನಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಚಲನಚಿತ್ರ ನಟ ವಿ. ರವಿಚಂದ್ರನ್, ನಟಿ ಮಾಲಾಶ್ರೀ ಅವರು ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ವಿವಿಧ ಕ್ಷೇತ್ರಗಳ ಸಾಧಕಿಯರಿಗೆ ‘ದಿಟ್ಟ ಮಹಿಳೆ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್‌ ತಿಳಿಸಿದರು.

ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮತ್ತು ಐಎಎಸ್‌ ಅಧಿಕಾರಿಗಳಾದ ಮೌನೀಶ್ ಮೌದ್ಗಿಲ್‌, ಸ್ನೇಹಲ್, ಸೂರಳ್ಕರ್ ವಿಕಾಸ್ ಕಿಶೋರ್, ಡಾ.ಹರೀಶ್ ಪಾಲ್ಗೊಳ್ಳಲಿದ್ದಾರೆ.

ನಟಿ ವಿನಯಪ್ರಸಾದ್, ಗಾಯಕಿ ಎಂ.ಡಿ.ಪಲ್ಲವಿ, ಯುನೈಟೆಡ್ ಆಸ್ಪತ್ರೆಯ ನಿರ್ದೇಶಕಿ ಡಾ.ವೀಣಾ ಸಿದ್ದಾರೆಡ್ಡಿ, ಸಹಾಯಕ ಪೊಲೀಸ್ ಕಮಿಷನರ್‌ ಎಂ.ಸಿ. ಕವಿತಾ, ಚಲನಚಿತ್ರ ನಟಿ ಶೀತಲ್ ಶೆಟ್ಟಿ, ಹಿರಿಯ ವಕೀಲೆ ಶ್ರೀದೇವಿ ಪಾಟೀಲ್, ಟಿವಿ9 ನಿರೂಪಕಿ ಶುಭಶ್ರೀ ಜೈನ್, ಪತ್ರಕರ್ತೆ ಪ್ರತಿಮಾ ಭಟ್, ವಿಸ್ತಾರ್ ನ್ಯೂಸ್ ನಿರೂಪಕಿ ಪ್ರತಿಭಾ ಪ್ರಕಾಶ್, ಸಿಂಧಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುಚಿತ್ರಾ ಮತ್ತು ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 14 ಮಹಿಳೆಯರಿಗೆ ಪ್ರಶಸ್ತಿ ನೀಡಲಾಗುತ್ತದೆ.

ಆರೋಗ್ಯ  ಉಚಿತ ತಪಾಸಣೆ ಮತ್ತು ಕಣ್ಣಿನ ತಪಾಸಣೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಮೃತ್ ರಾಜ್ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT