ಶುಕ್ರವಾರ, ಜೂನ್ 25, 2021
30 °C

ಡಿ.ಜೆ. ಹಳ್ಳಿ ಗಲಭೆ: ಸಿಸಿಬಿ ವಿಚಾರಣೆಗೆ ಹಾಜರಾದ ಪಾಲಿಕೆ ಸದಸ್ಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

BBMP Office

ಬೆಂಗಳೂರು: ಡಿ.ಜೆ. ಹಳ್ಳಿ ಗಲಭೆ ಸಂಬಂಧ ಪಾಲಿಕೆ ಸದಸ್ಯರಾದ ಸಂಪತ್ ರಾಜ್ ಹಾಗೂ ಜಾಕಿರ್, ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.

ಸೋಮವಾರವಷ್ಟೇ ಇಬ್ಬರಿಗೂ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಮಂಗಳವಾರ ಬೆಳಿಗ್ಗೆಯೇ ಇಬ್ಬರು ತಮ್ಮ ವಕೀಲರ ಸಮೇತ ವಿಚಾರಣೆಗೆ ಬಂದಿದ್ದಾರೆ.

ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ, ಡಿಸಿಪಿ ರವಿಕುಮಾರ್ ಕಚೇರಿಯಲ್ಲಿ ಇದ್ದಾರೆ. ಪ್ರಕರಣದ ತನಿಖಾಧಿಕಾರಿ ನೇತೃತ್ವದಲ್ಲಿ ಪಾಲಿಕೆ ಸದಸ್ಯರ ವಿಚಾರಣೆ ನಡೆಯುತ್ತಿದೆ.

ಶಾಸಕರ ಮನೆ ಹಾಗೂ ಠಾಣೆ ಮೇಲೆ ನಡೆದ ದಾಳಿ ಮತ್ತು ಗಲಭೆ ಹಿಂದೆ ರಾಜಕೀಯ ಉದ್ದೇಶ ಇರುವ ಅನುಮಾನ ಸಿಸಿಬಿಗೆ ಇದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು