ಮಂಗಳವಾರ, ಮಾರ್ಚ್ 28, 2023
31 °C

ಡಿ.ಜೆ ಹಳ್ಳಿ ಗಲಭೆ: ಬಂಧಿತರ ಮಾಹಿತಿ ಬಹಿರಂಗಕ್ಕೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಡಿ.ಜೆ ಹಳ್ಳಿ ಗಲಭೆ ಸಂಬಂಧ ಬಂಧಿತರಾಗಿರುವ ಎಲ್ಲರ ಮಾಹಿತಿಯನ್ನು ಸಿಆರ್‌ಪಿಸಿ ಸೆಕ್ಷನ್ 41–ಸಿ ಅನ್ವಯ ಬಹಿರಂಗಪಡಿಸಬೇಕು’ ಎಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ನೀಡಿದೆ.

ಜುನೈದ್ ಅಹಮದ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ಪೀಠ ವಿಚಾರಣೆ ನಡೆಸಿತು. ‘ಸಿಆರ್‌ಪಿಸಿ 41–ಸಿ ಪ್ರಕಾರ, ಬಂಧಿತರು ಮತ್ತು ಬಂಧನ ಕಾರ್ಯಾಚರಣೆ ನಡೆಸಿದ ಪೊಲೀಸರ ವಿವರವನ್ನು ಎಲ್ಲ ಪೊಲೀಸ್ ನಿಯಂತ್ರಣಾ ಕೊಠಡಿಗಳಲ್ಲಿ ಪ್ರದರ್ಶಿಸಬೇಕು’ ಎಂದು ಅರ್ಜಿದಾರರು ಹೇಳಿದ್ದಾರೆ.

‘ಯಾರನ್ನು ಬಂಧಿಸಲಾಗಿದೆ, ಅದಕ್ಕೆ ಕಾರಣ ಏನು ಎಂಬ ಮಾಹಿತಿಯನ್ನು  ಎಲ್ಲ ಪೊಲೀಸ್ ಕೇಂದ್ರ ಕಚೇರಿಯಲ್ಲಿ  ಪ್ರದರ್ಶಿಸಬೇಕು. ಮಾಹಿತಿ ಕಲೆ ಹಾಕಲು ನಗರ ಪೊಲೀಸ್ ಕಮಿಷನರ್‌ ಕಚೇರಿಗೆ ಭೇಟಿ ನೀಡಿದ್ದಾಗ ಎಲ್ಲಿಯೂ ಈ ವಿವರ ಕಾಣಿಸಿಲಿಲ್ಲ’ ಎಂದು ತಿಳಿಸಿದ್ದಾರೆ.

‘ಈ ಸೆಕ್ಷನ್‌ಗೆ ಅನುಗುಣವಾಗಿ ಎಲ್ಲಾ ವಿಧಿ–ವಿಧಾನಗಳನ್ನು ಅನುಸರಿಸಲಾಗಿದೆಯೇ ಎಂಬುದರ ಬಗ್ಗೆ ಸೆ.11ರಂದು ವಿವರ ಸಲ್ಲಿಸಬೇಕು’ ಎಂದು ಸರ್ಕಾರಕ್ಕೆ ಪೀಠ ಸೂಚನೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು