ಶನಿವಾರ, ಅಕ್ಟೋಬರ್ 31, 2020
28 °C

ಕ್ಲೇಮ್ ಕಮಿಷನರ್‌ಗೆ ಅಧಿಕಾರ ನೀಡಲು ಹೈಕೋರ್ಟ್ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆಯಿಂದ ಆಗಿರುವ ಹಾನಿಯ ಹೊಣೆಗಾರಿಕೆ ನಿಗದಿ ಮಾಡಲು ನೇಮಕ ಆಗಿರುವ ಕ್ಲೇಮ್ ಕಮಿಷನರ್ ಅವರಿಗೆ ವಿಚಾರಣಾ ಆಯೋಗ ಕಾಯ್ದೆಯಡಿ ಕೆಲವು ಅಧಿಕಾರಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

‘ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎಸ್. ಕೆಂಪಣ್ಣ ಅವರು ಕ್ಲೇಮ್ ಕಮಿಷನರ್ ಆಗಿ ನೇಮಕಗೊಂಡಿದ್ದು, ವಿಚಾರಣಾ ಆಯೋಗದ ಅಡಿಯಲ್ಲಿ ಅವರಿಗೆ ರಕ್ಷಣೆ ಬೇಕಿದೆ. ವಿಚಾರಣೆಗೆ ಸಾಕ್ಷಿಗಳನ್ನು ಕರೆಸಿಕೊಳ್ಳಲು ಅಧಿಕಾರ ನೀಡಬೇಕಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.

ಈ ಪ್ರಕರಣದ ತನಿಖೆಯ ಸ್ಥಿತಿಗತಿ ಬಗ್ಗೆ ವರದಿ ಸಲ್ಲಿಸುವಂತೆ ಎನ್‌ಐಎ(ರಾಷ್ಟ್ರೀಯ ತನಿಖಾ ಸಂಸ್ಥೆ) ಮತ್ತು ಪೊಲೀಸ್ ಇಲಾಖೆಗೆ ಪೀಠ ನಿರ್ದೇಶನ ನೀಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು