ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರು ಆಡಳಿತ ನಡೆಸುವ ‘ಮುಖ್ಯಮಂತ್ರಿ ಕಚೇರಿ’ಯ ವಾಸ್ತು ಹೇಗಿರಬೇಕು, ಅವರು ಕೂರುವ ಕುರ್ಚಿಯ ಸ್ಥಾನ ಮತ್ತು ದಿಕ್ಕು ಹೇಗಿರಬೇಕು ಎಂಬ ಬಗ್ಗೆ ಸಲಹೆ ನೀಡಲು ವಾಸ್ತು ತಜ್ಞ ವಿ.ವಿ.ಆರಾಧ್ಯ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಖ್ಯಮಂತ್ರಿ ಕಚೇರಿಯಲ್ಲಿ ಸುಮಾರು ಅರ್ಧ ಗಂಟೆ ಪರಿಶೀಲನೆ ನಡೆಸಿದರು. ಸಿದ್ದರಾಮಯ್ಯ ಇದ್ದಾಗ ಯಾವ ದಿಕ್ಕಿಗೆ ಅಭಿಮುಖವಾಗಿ ಕುರ್ಚಿ ಮತ್ತು ಮೇಜು ಇತ್ತು, ಶಿವಕುಮಾರ್ ಅವರ ಜನ್ಮಕುಂಡಲಿಗೆ ಅನುಗುಣವಾಗಿ ಹೇಗೆ ಬದಲಿಸಬಹುದು ಎಂಬುದರ ಲೆಕ್ಕಾಚಾರ ಹಾಕಿದರು. ಅವರು ಪರಿಶೀಲನೆ ನಡೆಸುವ ವೇಳೆಯಲ್ಲಿ ಕೊಠಡಿಯ ಎರಡೂ ಬಾಗಿಲುಗಳನ್ನು ಮುಚ್ಚಲಾಗಿತ್ತು. ಪರಿಶೀಲನೆಯ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಆರಾಧ್ಯ, ‘ಕೊಠಡಿಯಲ್ಲಿ ವಾಸ್ತುಶಾಸ್ತ್ರಕ್ಕೆ ಅನುಗುಣವಾಗಿ ಕೆಲವು ಬದಲಾವಣೆ ಮಾಡಲು ಸೂಚಿಸಿದ್ದೇನೆ’ ಎಂದರು. ಆ ಬದಲಾವಣೆಗಳು ಯಾವುವು ಎಂಬುದನ್ನು ಅವರು ಬಹಿರಂಗಪಡಿಸಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-933488256

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.