ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ ಮಾರ್ಗದ ಜತೆ ಡಬಲ್ ಡೆಕ್ಕರ್ ಫ್ಲೈಓವರ್: ಡಿ.ಕೆ. ಶಿವಕುಮಾರ್‌

Published 20 ನವೆಂಬರ್ 2023, 16:32 IST
Last Updated 20 ನವೆಂಬರ್ 2023, 16:32 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ‘ನಮ್ಮ ಮೆಟ್ರೊ’ ರೈಲು ಮತ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಡಬಲ್ ಡೆಕ್ಕರ್ ಫ್ಲೈಓವರ್‌ಗಳನ್ನು ನಿರ್ಮಿಸಲು ಸ್ಥಳಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

‘ಪ್ರಜಾವಾಣಿ‘ಗೆ ನೀಡಿದ ಸಂದರ್ಶನದಲ್ಲಿ ಈ ವಿವರ ಹಂಚಿಕೊಂಡ ಅವರು, ‘ಹೊಸದಾಗಿ ನಿರ್ಮಾಣವಾಗಲಿರುವ ಮೆಟ್ರೊ ಮಾರ್ಗ ಮತ್ತು ಇನ್ನೂ ಕಾಮಗಾರಿ ಆರಂಭವಾಗದ ಕಡೆಗಳಲ್ಲಿ ಫ್ಲೈಓವರ್-ಕಂ-ಮೆಟ್ರೊ ಮಾರ್ಗ ನಿರ್ಮಿಸಲು ಉದ್ದೇಶಿಸಲಾಗಿದೆ. ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಪ್ರಾಯೋಗಿಕವಾಗಿ ಈ ಕಾಮಗಾರಿ ಆರಂಭಿಸಲಾಗಿದೆ’ ಎಂದರು.

ರಾಗಿಗುಡ್ಡ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ರಸ್ತೆ- ಕಂ-ಮೆಟ್ರೊ ಮೇಲ್ಸೇತುವೆಯನ್ನು ಉಲ್ಲೇಖಿಸಿದ ಅವರು, ‘ನಗರದಲ್ಲಿ ಒಂದು ಫ್ಲೈಓವರ್ (ವಾಹನಗಳಿಗಾಗಿ) ಮತ್ತು ಮೆಟ್ರೊ ಮಾರ್ಗ ಇರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಕಾರಣಕ್ಕೆ ಸುರಂಗ ಮಾರ್ಗ ಯೋಜನೆ ವಿಳಂಬ ಆಗಬಹುದು’ ಎಂದರು.

‘ಈ ಡಬಲ್ ಡೆಕ್ಕರ್‌ಗಳ ನಿರ್ಮಾಣ ವೆಚ್ಚವನ್ನು ಬಿಬಿಎಂಪಿ, ಬಿಡಿಎ ಮತ್ತು ಬಿಎಂಆರ್‌ಸಿಎಲ್‌ ಹಂಚಿಕೊಳ್ಳಲಿವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT