ಶುಕ್ರವಾರ, ಏಪ್ರಿಲ್ 23, 2021
27 °C
ಉತ್ತರ ಕೊಡಿ ಯಡಿಯೂರಪ್ಪ ಅಭಿಯಾನ

ದುಡ್ಡು ಬಾಚಿಕೊಳ್ಳುವತ್ತ ಸಚಿವರ ಆಸಕ್ತಿ: ಡಿಕೆ ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೊರೊನಾದಿಂದ ಜನರನ್ನು ರಕ್ಷಿಸಲು ಧಾವಿಸಬೇಕಾದ ಸಚಿವರು ದುಡ್ಡು ಬಾಚಿಕೊಳ್ಳುವತ್ತ ಗಮನ ಹರಿಸಿದ್ದಾರೆ. ಈ ಹಗರಣಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರೇ ಉತ್ತರ ಕೊಡಿ’ ಎಂದು ಕೆ‍ಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಪ್ರತಿಹಂತದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವೆಂಟಿಲೇಟರ್, ಪಿಪಿಇ ಕಿಟ್‌ ಹೀಗೆ ಎಲ್ಲ ವಸ್ತುಗಳ ಖರೀದಿಗಳಲ್ಲೂ ಅಕ್ರಮ ನಡೆದಿವೆ. ಭ್ರಷ್ಟಾಚಾರ ‍ಪ್ರಮಾಣ ಶೇ 200ರಿಂದ ಶೇ 500ರವರೆಗೆ ಇದೆ’ ಎಂದು ಹರಿಹಾಯ್ದರು.

‘ಈ ಹಗರಣಗಳ ಬಗ್ಗೆ ಬೆಳಕು ಚೆಲ್ಲಿರುವ ಮಾಧ್ಯಮಗಳು ರಾಜಕೀಯ ಅಜೆಂಡಾ ಇಟ್ಟುಕೊಂಡಿಲ್ಲ. ಹೀಗಾಗಿ ಉತ್ತರ ಕೊಡಬೇಕು’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು