ಬೆಂಗಳೂರು: ನಗರದ ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಓಡಿಸಿದ ದ್ವಿಚಕ್ರ ವಾಹನದ ಮೇಲೆ ₹18,500 ದಂಡ ಬಾಕಿ ಇದ್ದು, KA04JZ2087 ಸಂಖ್ಯೆಯ ವಾಹನ 34 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದೆ.

ಬಿಡಿಎ ವತಿಯಿಂದ ಹೆಬ್ಬಾಳ ಜಂಕ್ಷನ್ನಲ್ಲಿ ನಿರ್ಮಿಸುತ್ತಿರುವ ಹೊಸ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಲು ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳೊಂದಿಗೆ ಬಂದಿದ್ದರು. ಸಚಿವ ಬೈರತಿ ಸುರೇಶ್ ಅವರೊಂದಿಗೆ ಹೆಲ್ಮೆಟ್, ಕಪ್ಪು ಕನ್ನಡಕ ಹಾಕಿಕೊಂಡು ಹೊಸ ಮೇಲ್ಸೇತುವೆ ಮೇಲೆ ಡಿಯೋ ಸ್ಕೂಟರ್ನಲ್ಲಿ ಒಂದು ಸುತ್ತು ಹೋಗಿ ಬಂದರು.

ಆದರೆ, ಅವರು ಐಎಸ್ಐ ಗುರುತು ಇಲ್ಲದ, ಗುಣಮಟ್ಟ ಹೊಂದಿಲ್ಲದ ಹೆಲ್ಮೆಟ್ ಧರಿಸಿದ್ದರು. ಅಲ್ಲದೇ ಅವರ ಹಿಂದೆಯೇ ಮತ್ತೊಂದು ಸ್ಕೂಟರ್ನಲ್ಲಿ ಬರುತ್ತಿದ್ದ ಶಾಸಕ ಎನ್.ಎ. ಹ್ಯಾರಿಸ್ ಅವರು ಹೆಲ್ಮೆಟ್ ಧರಿಸದಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

ಹೆಲ್ಮೆಟ್ ರಹಿತ ಚಾಲನೆ, ಸಿಗ್ನಲ್ ಜಂಪ್ ಸೇರಿದಂತೆ ಹಲವು ಪ್ರಕರಣಗಳು ಈ ವಾಹನದ ಮೇಲೆ ದಾಖಲಾಗಿದ್ದು, ಒಟ್ಟು ₹18,500 ದಂಡ ಪಾವತಿಸುವುದು ಬಾಕಿ ಇದೆ ಎಂದು ಸಂಚಾರ ಪೊಲೀಸ್ ಇಲಾಖೆಯ ದತ್ತಾಂಶಗಳಿಂದ ತಿಳಿದುಬಂದಿದೆ.

ಈ ವಾಹನದ ಮಾಲೀಕ ಹೆಲ್ಮೆಟ್ ರಹಿತ ಚಾಲನೆ, ಸಿಗ್ನಲ್ ಜಂಪ್ ಸೇರಿ ಹಲವು ಸಂಚಾರ ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಫೋಟೋಗಳು ಹಿಂದೆಯೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.