ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತದಲ್ಲಿ ಮೃತಪಟ್ಟಿದ್ದ ಸಮನ್ವಿ ಮನೆಗೆ ಡಿಕೆಶಿ ಭೇಟಿ

Last Updated 18 ಜನವರಿ 2022, 17:36 IST
ಅಕ್ಷರ ಗಾತ್ರ

ಬೆಂಗಳೂರು: ಇತ್ತೀಚೆಗೆ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟಿದ್ದ ಬಾಲಕಿ ಸಮನ್ವಿ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಂಗಳವಾರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

‘ಕಲರ್ಸ್ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್ ಸ್ಟಾರ್‌’ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಳು. ಆಕೆಯಲ್ಲಿ ಅಗಾಧ ಪ್ರತಿಭೆ ಇತ್ತು. ಚಿಕ್ಕ ವಯಸ್ಸಿನಲ್ಲೇ ಮೃತಪಟ್ಟಿದ್ದು ನೋವಿನ ಸಂಗತಿ’ ಎಂದರು.

ಸಮನ್ವಿಹಾಗೂ ಆಕೆಯ ತಾಯಿ ಅಮೃತಾ ನಾಯ್ಡುಕೋಣನಕುಂಟೆ ಬಳಿಯ ವಾಜರಹಳ್ಳಿ ಮುಖ್ಯರಸ್ತೆಯಲ್ಲಿ ಸ್ಕೂಟಿಯಲ್ಲಿ ಹೊರಟಿದ್ದಾಗ ಅಪಘಾತ ಸಂಭವಿಸಿತ್ತು. ಆರು ವರ್ಷದ ಸಮನ್ವಿ ಮೃತಪಟ್ಟಿದ್ದಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT