ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾ

Last Updated 25 ಜುಲೈ 2020, 19:13 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಇತರರ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ನೀಡಿರುವ ಅನುಮತಿಪ್ರಶ್ನಿಸಿ ಸಲ್ಲಿಕೆಯಾಗಿದ್ದಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಡಿ.ಕೆ.ಶಿವಕುಮಾರ್ ಅವರ ಸಂಬಂಧಿ ಶಶಿಕುಮಾರ್ ಶಿವಣ್ಣ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ‘ದೆಹಲಿ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್ ಕಾಯ್ದೆ ಪ್ರಕಾರ ಸಿಬಿಐ ತನಿಖೆ ನಡೆಯುತ್ತಿರುವಾಗ ರಾಜ್ಯ ಸರ್ಕಾರ ‘ಸಮ್ಮತಿ’ ಬದಲಿಗೆ ‘ಅನುಮೋದನೆ’ ಎಂಬ ಪದವನ್ನು ಬಳಸಿದೆ. ಅನುಮೋದನೆ ಆಡಳಿತಾತ್ಮಕ ವಿಷಯವಾಗಿದ್ದರೂ ಸರ್ಕಾರ ಇದಕ್ಕೆ ಸಕಾರಣ ತಿಳಿಸಬೇಕಿತ್ತು’ ಎಂದು ಅವರ ಪರ ವಕೀಲರು ವಾದಿಸಿದ್ದರು. ವಿಚಾರಣೆ ನಡೆಸಿದನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ,‘ಸಿಬಿಐ ತನಿಖೆಗೆ ಸರ್ಕಾರ ನೀಡಿರುವ ಅನುಮತಿ ಪ್ರಶ್ನಿಸಲು ಅರ್ಜಿದಾರರಿಗೆ ಯಾವುದೇ ಅಧಿಕಾರ ಇಲ್ಲ’ ಎಂದು ಹೇಳಿ ಅರ್ಜಿ ವಜಾಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT