ಮಂಗಳವಾರ, ಜೂನ್ 2, 2020
27 °C

ಕೇಂದ್ರದಿಂದ ಸರ್ವ ‍‍ಪಕ್ಷ ಸಭೆ: ಡಿಕೆಶಿ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ಹಬ್ಬುತ್ತಿರುವ ವಿಷಮ ಪರಿಸ್ಥಿತಿ ಎದುರಿಸಲು ಹಾಗೂ ಅದರ ನಿರ್ವಹಣೆಗೆ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಾಗತಿಸಿದ್ದಾರೆ. ‘ಬಹು ಹಿಂದೆಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ವಪಕ್ಷ ಸಭೆ ಕರೆಯಬೇಕು. ಈ ಸಂಕಷ್ಟ ಎದುರಿಸಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದೆ. ತಡವಾಗಿಯಾದರೂ ಕೇಂದ್ರ ಸರ್ಕಾರ ಎಚ್ಚೆತ್ತಿದೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಪಿಸಿಸಿ ವಿಷನ್‌ ಕರ್ನಾಟಕ ರಚನೆ

ಲಾಕ್‌ಡೌನ್‌ನಿಂದ ಆಗಿರುವ ಆರ್ಥಿಕ ಸಂಕಷ್ಟ ಎದುರಿಸುವ ಬಗ್ಗೆ ರೂಪರೇಷೆಗಳನ್ನು ಸಿದ್ಧಪಡಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಾಸಕ ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ‘ವಿಷನ್ ಕರ್ನಾಟಕ’ ಸಮಿತಿ ರಚಿಸಿದ್ದಾರೆ. ಈ ಸಮಿತಿಗೆ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಸಂಚಾಲಕರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು