ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ ಯಾವುದೇ ಕಾಮಗಾರಿ ಆರಂಭಿಸಬೇಡಿ: ಗುತ್ತಿಗೆದಾರರ ಸಂಘ

Published 15 ಆಗಸ್ಟ್ 2023, 15:40 IST
Last Updated 15 ಆಗಸ್ಟ್ 2023, 15:40 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ಯಾವುದೇ ರೀತಿಯ ಕಾಮಗಾರಿಗಳನ್ನು ಆರಂಭಿಸಬೇಡಿ’ ಎಂದು ಗುತ್ತಿಗೆದಾರರಿಗೆ ಬಿಬಿಎಂಪಿ ಗುತ್ತಿಗೆದಾರರ ಸಂಘ ಸೂಚಿಸಿದೆ.

‘ಬಿಲ್‌ ಪಾವತಿ ಮಾಡುವವರೆಗೂ ಕಾಮಗಾರಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿತ್ತು. ಇದರಂತೆ ಆ.7ರಿಂದ ಕಾಮಗಾರಿಗಳು ಸ್ಥಗಿತಗೊಂಡಿವೆ. ಕೆಲವು ವ್ಯಕ್ತಿಗಳು ಕಾಮಗಾರಿ ಪ್ರಾರಂಭಿಸಲು ಗುತ್ತಿಗೆದಾರರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಗುತ್ತಿಗೆದಾರರ ಒಗ್ಗಟ್ಟನ್ನು ಮುರಿಯುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು’ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್‌. ಅಂಬಿಕಾಪತಿ ತಿಳಿಸಿದ್ದಾರೆ.

‘ಯಾವುದೇ ಗುತ್ತಿಗೆದಾರರು ಒತ್ತಡಕ್ಕೆ ಒಳಗಾಗಿ ಕಾಮಗಾರಿಗಳನ್ನು ಆರಂಭಿಸಬಾರದು. ಇದರಿಂದ ನಮ್ಮ ಹೋರಾಟಕ್ಕೆ ಧಕ್ಕೆಯಾಗುತ್ತದೆ’ ಎಂದಿದ್ದಾರೆ.

‘ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರು ಆ.19ರೊಳಗೆ ಬಿಲ್ ಹಣವನ್ನು ಪಾವತಿ ಮಾಡುವ ಭರವಸೆಯನ್ನು ನೀಡಿದ್ದಾರೆ. ಹೀಗಾಗಿ ಅಲ್ಲಿಯವರೆಗೆ ಕಾದು ನೋಡಲು ನಿರ್ಧರಿಸಲಾಗಿದೆ. ಆ.21ರಂದು ಗುತ್ತಿಗೆದಾರರ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಗುವುದು’ ಎಂದು ಸಂಘದ ಕಾರ್ಯಾಧ್ಯಕ್ಷ ಜಿ.ಎಂ. ರವೀಂದ್ರ ಹೇಳಿದ್ದಾರೆ.

‘ಪ್ರಸ್ತುತ ಸನ್ನಿವೇಶದಲ್ಲಿ ಬಾಕಿ ಬಿಲ್‌ ಪಡೆಯಲು ತಾಳ್ಮೆ ಹಾಗೂ ಒಗ್ಗಟ್ಟಿನಿಂದ ನಿರಂತರ ಹೋರಾಡುವುದು ಅಗತ್ಯವಾಗಿದೆ. ಇದನ್ನು ಎಲ್ಲ ಗುತ್ತಿಗೆದಾರರೂ ಅನುಸರಿಸಬೇಕು’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಂ. ನಂದಕುಮಾರ್‌ ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT