ಶುಕ್ರವಾರ, ಮೇ 27, 2022
28 °C

ವೈದ್ಯ ಆತ್ಮಹತ್ಯೆ: ಬ್ಲ್ಯಾಕ್‌ಮೇಲ್ ಮಾಡಿದ್ದವ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೈಬರ್ ವಂಚಕರ ‘ಬೆತ್ತಲೆ ವಿಡಿಯೊ’ ಬ್ಲ್ಯಾಕ್‌ಮೇಲ್‌ಗೆ ಹೆದರಿ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ, ಆರೋಪಿಯನ್ನು ನಗರದ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

‘ನಗರದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ವೈದ್ಯ, ಕೆಂಗೇರಿ ರೈಲು ನಿಲ್ದಾಣದ ಸಮೀಪ ಹಳಿ ಮೇಲೆ ರೈಲಿಗೆ ತಲೆಕೊಟ್ಟು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಮರಣಪತ್ರ ಆಧರಿಸಿ ಪ್ರಕರಣ ದಾಖಲಿಸಿಕೊಂಡು, ಸೈಬರ್ ವಂಚಕರೊಬ್ಬರನ್ನು ಬಂಧಿಸಲಾಗಿದೆ‘ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಸಾಮಾಜಿಕ ಮಾಧ್ಯಮಗಳಲ್ಲಿ ವೈದ್ಯ ಖಾತೆಗಳನ್ನು ತೆರೆದಿದ್ದರು. ಯುವತಿ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದ ವಂಚಕ, ವೈದ್ಯನಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದರು. ಅದನ್ನು ಸ್ವೀಕರಿಸಿದ್ದ ವೈದ್ಯ, ಖಾತೆಯಿಂದ ಬಂದ ಸಂದೇಶಗಳಿಗೆ ಪ್ರತಿಕ್ರಿಯಿಸಲಾರಂಭಿಸಿದ್ದರು. ರಾತ್ರಿ ಕರೆ ಮಾಡಿದ್ದ ವಂಚಕ, ವೈದ್ಯನನ್ನು ಪ್ರಚೋದಿಸಿ ಬೆತ್ತಲೆ ವಿಡಿಯೊ ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡಲಾರಂಭಿಸಿದ್ದ’ ಎಂದೂ ಹೇಳಿದರು.

'ವಂಚಕನ ಬ್ಲ್ಯಾಕ್‌ಮೇಲ್‌ನಿಂದ ಹೆದರಿದ್ದ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದರು. ತಾಂತ್ರಿಕ ಪುರಾವೆಗಳನ್ನು ಸಂಗ್ರಹಿಸಿ ಆರೋಪಿಯನ್ನು ಬಂಧಿಸಲಾಗಿದ್ದು, ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕಿದೆ' ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು