ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿಗೆ ತಲೆಕೊಟ್ಟು ವೈದ್ಯ ಆತ್ಮಹತ್ಯೆ

Published 18 ಏಪ್ರಿಲ್ 2024, 15:23 IST
Last Updated 18 ಏಪ್ರಿಲ್ 2024, 15:23 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕ ರೈಲು ನಿಲ್ದಾಣದ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವೈದ್ಯರೊಬ್ಬರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‌

ಅನಂತ್ ಪ್ರಸಾದ್ (38) ಆತ್ಮಹತ್ಯೆ ಮಾಡಿಕೊಂಡ ವೈದ್ಯ.

‘ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಅನಂತ್‌ ಪ್ರಸಾದ್ ಅವರು ‘ಬೆಂಗಳೂರು ನಾರ್ಥ್‌ ಆಸ್ಪತ್ರೆ’ಯಲ್ಲಿ ಮಕ್ಕಳ ತಜ್ಞರಾಗಿ ಕೆಲಸ ಮಾಡುತ್ತಿದ್ದರು. ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದು, ಪತ್ನಿ ಜತೆ ಹೆಬ್ಬಾಳ ಬಳಿಯ ಕೆಂಪಾಪುರದಲ್ಲಿ ವಾಸವಾಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಬುಧವಾರ ಸಂಜೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿರುವ ಡೆತ್‌ನೋಟ್‌ ಅವರ ಪ್ಯಾಂಟಿನ ಜೇಬಿನಲ್ಲಿ ಸಿಕ್ಕಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ’ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.

ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT