ಬೆಂಗಳೂರು: ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ವಿಸಿಎನ್ ವೈದ್ಯರ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಡಾ.ಎಸ್.ರಾಜು, ‘ಕೋಲ್ಕತ್ತದ ಆರ್.ಜೆ. ಕರ್ ವೈದ್ಯಕೀಯ ಆಸ್ಪತ್ರೆಯ ಮೇಲೆ ದಾಳಿ ಮಾಡಿದವರ ವಿರುದ್ಧ ಕ್ರಮಜರುಗಿಸಬೇಕು. ವೈದ್ಯರು ಆರೋಗ್ಯ ಸಿಬ್ಬಂದಿಗೆ ಸರ್ಕಾರ ಭದ್ರತೆ ಒದಗಿಸಬೇಕು’ ಎಂದು ಆಗ್ರಹಪಡಿಸಿದರು.

’ರೋಗಿಗಳ ಜೀವ ರಕ್ಷಿಸುವ ವೈದ್ಯರನ್ನು ಗೌರವದಿಂದ ಕಾಣುವವಾತಾವರಣ ನಿರ್ಮಿಸುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ, ಡಾ.ಬಿ.ಟಿ.ರಮೇಶ್, ಡಾ.ಭೋಜಮ್ಮ, ಡಾ.ವೆಂಕಟರಾಮ್, ಡಾ.ಚಂದ್ರಶೇಖರ್, ಡಾ.ಚಂದ್ರಿಕಾ ಆನಂದ್, ಡಾ.ಪ್ರೀತ್ ಶೆಟ್ಟಿ, ಡಾ. ಮಂಜುನಾಥ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.