ಗುರುವಾರ , ಮಾರ್ಚ್ 23, 2023
30 °C

189 ವೈದ್ಯರಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ ಸಮಯದಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ 189 ವೈದ್ಯರನ್ನು ಇನ್ನರ್‌ವ್ಹೀಲ್‌ ಕ್ಲಬ್‌ ಬೆಂಗಳೂರು ಡಿಸ್ಟ್ರಿಕ್ಟ್‌ 319 ವತಿಯಿಂದ ಗುರುವಾರ ಸನ್ಮಾನಿಸಲಾಯಿತು.

ಕೇಂದ್ರ ವಾಣಿಜ್ಯ ಪ್ರದೇಶ (ಸಿಬಿಡಿ) ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಲ್ಯಾವೆಲ್ಲೆ ರಸ್ತೆಯಲ್ಲಿರುವ ರೋಟರಿ ಹೌಸ್‌ ಆಫ್‌ ಫ್ರೆಂಡ್‌ಶಿಪ್‌ನಲ್ಲಿ ನಡೆದ ಸಮಾರಂಭದಲ್ಲಿ ಶಾಂತಿನಗರ ಶಾಸಕ ಎನ್‌.ಎ.ಹ್ಯಾರಿಸ್‌ ಪಾಲ್ಗೊಂಡಿದ್ದರು.

ಬೌರಿಂಗ್‌ ಆಸ್ಪತ್ರೆ, ಶಾಂತಿನಗರದ 111 ಮತ್ತು 117ನೇ ವಾರ್ಡ್‌ಗಳ ಆರೋಗ್ಯ ಕೇಂದ್ರ ಹಾಗೂ ಪ್ರಿಮ್‌ರೋಸ್‌ ರಸ್ತೆಯಲ್ಲಿರುವ ಬಿಬಿಎಂಪಿ ತುರ್ತು ನಿಗಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಹ್ಯಾರಿಸ್‌ ಅವರು ಸ್ಮರಣಿಕೆ ನೀಡಿ ಗೌರವಿಸಿದರು. ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. 

ಕೋವಿಡ್ ಎರಡನೇ ಅಲೆಯ ಸಮಯದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ವೈದ್ಯರ ಪೈಕಿ 756 ಮಂದಿ ಮೃತಪಟ್ಟಿದ್ದು, ಅವರಿಗೆ ಮೌನ ನಮನ ಸಲ್ಲಿಸಲಾಯಿತು. ರೋಟರಿ ಕ್ಲಬ್‌ ಆಫ್‌ ಬೆಂಗಳೂರು ಅಧ್ಯಕ್ಷ ಗಿರೀಶ್‌ ರಾಮನಾಥನ್‌ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು