ಬೆಂಗಳೂರು: ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಪ್ರಕರಣದಲ್ಲಿ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಕರ್ನಾಟಕ ಶಾಖೆ ನೇತೃತ್ವದಲ್ಲಿ ವೈದ್ಯರು ನಗರದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ನಡೆಸಿದರು.

ಚಾಮರಾಜಪೇಟೆಯಲ್ಲಿರುವ ಐಎಂಐ ಕರ್ನಾಟಕ ಶಾಖೆಯ ಸಭಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ನಡೆಸಿದರು. ಮಳೆಯ ಕಾರಣ ಸಭಾಂಗಣದಲ್ಲಿಯೇ ಪ್ರತಿಭಟನೆಯನ್ನೂ ನಡೆಸಿ, ವೈದ್ಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷತೆ ಒದಗಿಸಲು ಆಗ್ರಹಿಸಿದರು.

‘ವೈದ್ಯರ ಮೇಲೆ ಯಾವುದೇ ಹಿಂಸೆ, ದೌರ್ಜನ್ಯ ನಡೆಯದಂತೆ ನೀತಿ ರೂಪಿಸಬೇಕು. ಆಸ್ಪತ್ರೆಗಳಿಗೆ ರಕ್ಷಣೆ ನೀಡಲು ಈಗಿರುವ ಕಾಯ್ದೆಗೆ ತಿದ್ದುಪಡಿ ತರಬೇಕು. ಆಸ್ಪತ್ರೆಗಳನ್ನು ಸುರಕ್ಷಿತ ವಲಯವೆಂದು ಘೋಷಿಸಿ, ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಅಗತ್ಯ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಬೇಕು. ವಿಶ್ರಾಂತಿ ಕೊಠಡಿಗಳನ್ನು ಹೆಚ್ಚಿಸಬೇಕು’ ಎಂದು ಪ್ರತಿಭಟನಾ ನಿರತ ವೈದ್ಯರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

‘ಇದು ಪ್ರತಿಭಟನೆ ಮಾತ್ರ ಆಗಿರದೆ, ನ್ಯಾಯಕ್ಕಾಗಿ ನಡೆಸಿದ ಹೋರಾಟವಾಗಿದೆ. ವೈದ್ಯರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕಾನೂನು ಬಲಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ಸ್ವರೂಪ ನಿರ್ಧರಿಸಲಾಗುತ್ತದೆ’ ಎಂದು ಐಎಂಎ ಕರ್ನಾಟಕ ಶಾಖೆ ಅಧ್ಯಕ್ಷ ಡಾ.ಎಸ್. ಶ್ರೀನಿವಾಸ್ ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.