ಬೆಂಗಳೂರು: ಕಾರಿನ ಮೇಲೆ ಶ್ವಾನ ಮೂತ್ರ ಮಾಡಿತೆಂಬ ಕಾರಣಕ್ಕೆ ಅದರ ಮಾಲೀಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಲಾಗಿದ್ದು, ಈ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಭಾನುವಾರ ರಾತ್ರಿ ನಡೆದಿರುವ ಘಟನೆ ಬಗ್ಗೆ ಗಾಯಾಳು ಗೇರಿ ರೊಜಾರಿಯೊ ಎಂಬುವವರು ದೂರು ನೀಡಿದ್ದಾರೆ. ಕಾರಿನ ಮಾಲೀಕ ಚಾರ್ಲ್ಸ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಎಚ್ಎಎಲ್ ನಿವೃತ್ತ ಉದ್ಯೋಗಿ ಗೇರಿ, ತಮ್ಮ ಶ್ವಾನದ ಜೊತೆ ವಾಯುವಿಹಾರ ಮಾಡುತ್ತಿದ್ದರು. ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಶ್ವಾನ ಮೂತ್ರ ವಿಸರ್ಜನೆ ಮಾಡಿತ್ತು. ಅದನ್ನು ನೋಡಿದ್ದ ಕಾರಿನ ಮಾಲೀಕ ಚಾರ್ಲ್ಸ್, ಈ ಬಗ್ಗೆ ಪ್ರಶ್ನಿಸಿದ್ದರು. ಗೇರಿ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದರು. ಅದೇ ವಿಚಾರವಾಗಿ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.’

‘ಕೋಪಗೊಂಡಿದ್ದ ಚಾರ್ಲ್ಸ್, ಗೇರಿ ಅವರಿಗೆ ಕಲ್ಲಿನಿಂದ ಹೊಡೆದಿದ್ದರು. ತೀವ್ರ ಗಾಯಗೊಂಡ ಗೇರಿ, ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ನಂತರ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದಾರೆ’ ಎಂದೂ ಪೊಲೀಸ್ ಮೂಲಗಳು
ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.