ಮಂಗಳವಾರ, ಜೂನ್ 28, 2022
21 °C

ಮನೆಗೆಲಸ ಕಾರ್ಮಿಕರಿಗೆ ಪರಿಹಾರ ತಲುಪಿಸಲು ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ ಲಾಕ್‌ಡೌನ್ ಸಂದರ್ಭದಲ್ಲಿ ಮನೆ ಕೆಲಸ ಮಾಡುವವರಿಗೂ ಒಂದು ಬಾರಿಯ ಪರಿಹಾರ ಯೋಜನೆಯ ಲಾಭ ದೊರಕುವಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ವಿವಿಧ ವರ್ಗಗಳ ಕಾರ್ಮಿಕರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ನೊಂದಾಯಿಸಿಕೊಂಡವರಿಗೆ ₹2 ಸಾವಿರ ಪರಿಹಾರ ಮೊತ್ತ ಪಾವತಿಸಲಾಗುತ್ತದೆ. ಮನೆ ಕೆಲಸ ಮಾಡುವವರಿಗೆ ಡಿಜಿಟಲ್ ತಂತ್ರಜ್ಞಾನ ಬಳಕೆ ಜ್ಞಾನ ಇಲ್ಲದ ಕಾರಣ ಅವರು ಪೋರ್ಟಲ್‌ನಲ್ಲಿ ನೊಂದಾಯಿಸಿಕೊಳ್ಳಲು ಕಷ್ಟವಾಗಲಿದೆ ಎಂದು ಮನೆಗೆಲಸ ಕಾರ್ಮಿಕರ ಹಕ್ಕುಗಳ ಒಕ್ಕೂಟ ತಿಳಿಸಿದೆ.

ಒಕ್ಕೂಟ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರ ವಾದ ಸರಿಯಾಗಿದೆ. ಮನೆ ಕೆಲಸ ಮಾಡುವವರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸುವುದು ಕಷ್ಟವಾಗಲಿದೆ ಎಂದು ಅಭಿಪ್ರಾಯಪಟ್ಟಿತು.

ಎಲ್ಲಾ ಅರ್ಹರಿಗೂ ಈ ಪರಿಹಾರದ ಲಾಭ ತಲುಪಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಜೂ. 14ಕ್ಕೆ ಮುಂದೂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು