ಬೆಂಗಳೂರು:ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದಸಾಹಿತಿ ರಾಂ.ಕೆ. ಹನುಮಂತಯ್ಯ ಮತ್ತು ದಿವಂಗತ ಹೆಬ್ಬಗೋಡಿ ಗೋಪಾಲ್ ದತ್ತಿ ಪುಸ್ತಕ ಬಹುಮಾನವನ್ನು ಸಾಹಿತಿಗಳಿಗೆ ಮಂಗಳವಾರ ಪ್ರದಾನ ಮಾಡಲಾಯಿತು.

ಶೇಷಾದ್ರಿಪುರಂ ಕಾಲೇಜಿನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಗೀತಾ ರಾಮಾನುಜಂ, ‘ಅಧ್ಯಾತ್ಮವು ಒಂದು ಸಮುದಾಯ ಅಥವಾ ಹಿರಿಯರಿಗೆ ಸಂಬಂಧಪಟ್ಟಿದ್ದು ಎಂದು ಯುವಪೀಳಿಗೆ ತಪ್ಪಾಗಿ ಭಾವಿಸಿದೆ. ಅಧ್ಯಾತ್ಮ ಎಂದರೆ ನಮ್ಮನ್ನು ನಾವು ಅವಲೋಕನ ಮಾಡಿಕೊಳ್ಳುವುದು. ಮನಸ್ಸಿನಿಂದ ಕಲುಷಿತ ಚಿಂತನೆಗಳನ್ನು ತೆಗೆದುಹಾಕುವುದು’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ರಾಂ.ಕೆ. ಹನುಮಂತಯ್ಯ, ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಆರ್.ವಿ. ಮಂಜುನಾಥ, ಕರ್ನಾಟಕಪ್ರತಿಭಾ ಕೇಂದ್ರದ ಅಧ್ಯಕ್ಷ ಪಾನ್ಯಂ ನಟರಾಜು, ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷ ಡಾ.ಎನ್. ರಾಮಲಿಂಗೇಶ್ವರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.