ಸೋಮವಾರ, ಫೆಬ್ರವರಿ 17, 2020
30 °C

ತನಿಖೆ ದಾರಿತಪ್ಪಿಸುವಂತೆ ಮಾತನಾಡಬೇಡಿ: ಎಚ್‌ಡಿಕೆಗೆ ಕಾರಜೋಳ ತಾಕೀತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯನ್ನೇ ದಾರಿ ತಪ್ಪಿಸುವಂತೆ ಯಾರೂ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಈ ರೀತಿಯ ‌ಪ್ರಕರಣ ಆದಾಗ ಸರ್ಕಾರ ‌ಪೂರ್ವಾಗ್ರಹ ಪೀಡಿತ ಆಗಿರುವುದಿಲ್ಲ. ಸತ್ಯ- ಅಸತ್ಯದ ಬಗ್ಗೆ ಪರಿಶೀಲನೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಬೇಕು’ ಎಂದರು.

ಕೆಲವರು ಪೊಲೀಸರ ನೈತಿಕತೆಯೇ ಕುಸಿಯುವಂತೆ ಮಾತನಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದವರು. ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಸಲಹೆ ನೀಡಿದರು. ‘ಮುಖ್ಯಮಂತ್ರಿ ವಿದೇಶ ಪ್ರವಾಸದಿಂದ ಬಂದ ಕೂಡಲೇ ಸಂಪುಟ ವಿಸ್ತರಣೆ ಆಗಲಿದೆ' ಎಂದು ತಿಳಿಸಿದರು.

ಕತೆ ಸೃಷ್ಟಿಸಬಾರದು ಎಂದಿದ್ದ ಎಚ್‌ಡಿಕೆ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಮಾತನಾಡಿದ್ದ ಎಚ್‌.ಡಿ.ಕುಮಾರಸ್ವಾಮಿ, ‘ಮಂಗಳೂರಿನ ವಿಮಾನ ನಿಲ್ದಾಣದ ಬಳಿ ಬಾಂಬ್‌ ಇಟ್ಟಿದ್ದು ಯಾರು ಎಂಬುದನ್ನು ಪತ್ತೆ ಹಚ್ಚಬೇಕು. ಪೊಲೀಸರು ಪತ್ತೆ ಕಾರ್ಯಕ್ಕೆ 15 ದಿನ ಅಥವಾ ತಿಂಗಳು ಸಮಯ ತೆಗೆದುಕೊಂಡು ಹೊಸ ಕತೆ ಸೃಷ್ಟಿಸಬಾರದು. ಕೆಲವರನ್ನು ಮೆಚ್ಚಿಸಲು ಅಧಿಕಾರಿಗಳು ಸಂಶಯಾತ್ಮಕ ಹೇಳಿಕೆ ನೀಡುತ್ತಾರೆ. ಅದಕ್ಕೆ ಆಸ್ಪದ ನೀಡಬಾರದು. ಸಂಘರ್ಷಕ್ಕೆ ಎಡೆಮಾಡಬಾರದು’ ಎಂದು ಹೇಳಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು