ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬನ್‌ ಪಾರ್ಕಲ್ಲಿ ಅನಧಿಕೃತ ಕಾರ್ಯಕ್ರಮಕ್ಕೆ ಹಣ ಪಾವತಿಸಬೇಡಿ: ತೋಟಗಾರಿಕೆ ಇಲಾಖೆ

Published 22 ಏಪ್ರಿಲ್ 2024, 16:30 IST
Last Updated 22 ಏಪ್ರಿಲ್ 2024, 16:30 IST
ಅಕ್ಷರ ಗಾತ್ರ

ಬೆಂಗಳೂರು: ಯಾವುದೇ ಅನುಮತಿ ಪಡೆಯದೇ ಕಬ್ಬನ್‌ ಉದ್ಯಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಹೊರಟಿರುವ ಸಂಸ್ಥೆಯೊಂದು ಜನರಿಂದ ಶುಲ್ಕ ಸಂಗ್ರಹಿಸುತ್ತಿದೆ. ಹಣ ನೀಡಿ ಯಾರೂ ಮೋಸ ಹೋಗಬಾರದು ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.

‘ಟ್ರೋವ್‌ ಎಕ್ಸ್‌ಪೀರಿಯನ್ಸ್‌’ ಹೆಸರಿನ ಸಂಸ್ಥೆಯೊಂದು ‘ಫಾರೆಸ್ಟ್‌ ಬಾತಿಂಗ್‌ ಎಕ್ಸ್‌ಪೀರಿಯನ್ಸ್‌‘ ಎಂಬ ಕಾರ್ಯಕ್ರಮವನ್ನು ಏ.28ರಂದು ಆಯೋಜಿಸುವುದಾಗಿ ಆ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಹೇಳಿಕೊಂಡಿದೆ. ಇದಕ್ಕಾಗಿ ಜನರಿಂದ ₹ 1500 ಶುಲ್ಕ ನಿಗದಿಪಡಿಸಿದೆ. ಆದರೆ, ಈ ಕಾರ್ಯಕ್ರಮ ನಡೆಸಲು ಇಲಾಖೆಯಿಂದ ಅನುಮತಿ ಪಡೆದಿಲ್ಲ. ಈ ಬಗ್ಗೆ ವಾಯುವಿಹಾರಿಗಳು ಇಲಾಖೆಗೆ ಮೌಖಿಕವಾಗಿ ದೂರು ನೀಡಿದ್ದಾರೆ. ಅದರ ಆಧಾರದಲ್ಲಿ ಪೊಲೀಸ್‌ ಠಾಣೆಯಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಕರಣ ದಾಖಲಿಸಲಾಗಿದೆ. ಶುಲ್ಕ ಪಾವತಿಸಿ ಯಾರೂ ಮೋಸಹೋಗಬಾರದು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT