ಬೆಂಗಳೂರು: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಇತ್ತೀಚೆಗಷ್ಟೆ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಮಂಜುನಾಥ್‌ನನ್ನು ಪೊಲೀಸರು ಗುಂಡು ಹಾರಿಸಿ ಬುಧವಾರ ಬಂಧಿಸಿದ್ದಾರೆ.

‘ಪ್ರಕರಣ ಸಂಬಂಧ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿದ್ದ ಆರೋಪಿಯನ್ನು ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಮಂಜುನಾಥ್ ಹಲ್ಲೆಗೆ ಮುಂದಾಗಿದ್ದ. ಶರಣಾಗಲು ಸೂಚಿಸಿದರೂ, ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ.ಈ ವೇಳೆ ಇನ್‌ಸ್ಪೆಕ್ಟರ್ ಕಿಶೋರ್ ಆರೋಪಿ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದರು. ಆರೋಪಿ ವಿರುದ್ಧ ಹಲವು ಪ್ರಕರಣಗಳು ಇವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏ.8ರಂದು ಮಮತಾ ಬಸು (75) ಹಾಗೂ ಅವರ ಮಗನ ಸ್ನೇಹಿತ ದೇವಬ್ರತ್ (41) ಎಂಬುವರ ಕೊಲೆಯಾಗಿತ್ತು. ಮನೆಗೆ ನುಗ್ಗಿದ್ದ ಆರೋಪಿ,ಇಬ್ಬರನ್ನೂ ಹತ್ಯೆ ಮಾಡಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಸಮೇತ ಪರಾರಿಯಾಗಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.