ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಾರಿ ತಪ್ಪಿಸುವ ಗಿಡ‘ಕ್ಕೆ ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ

Published 27 ಮೇ 2024, 17:11 IST
Last Updated 27 ಮೇ 2024, 17:11 IST
ಅಕ್ಷರ ಗಾತ್ರ

ಬೆಂಗಳೂರು: ಕಥೆಗಾರ ಸ್ವಾಮಿ ಪೊನ್ನಾಚಿ ಅವರ ‘ದಾರಿ ತಪ್ಪಿಸುವ ಗಿಡ‘ ಕಥಾಸಂಕಲನವು ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ನೀಡುವ 2023ನೇ ಸಾಲಿನ ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿಗೆ ಆಯ್ಕೆಯಾಗಿದೆ.

ಲೇಖಕಿ ಆರ್‌. ಸುನಂದಮ್ಮ, ಲೇಖಕ ಹರೀಶ್ ಗಂಗಾಧರ್‌ ಮತ್ತು ಕೆ. ವೈ ನಾರಾಯಣ ಸ್ವಾಮಿ ಅವರು ತೀರ್ಪುಗಾರರಾಗಿದ್ದರು. 

ಜೂನ್‌ 9ರಂದು ಮಂಡ್ಯದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿಯು ₹25,000 ನಗದು, ಪ್ರಶಸ್ತಿ ಫಲಕ ಮತ್ತು ಪ್ರಶಸ್ತಿ ಪತ್ರ ಹೊಂದಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT