ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯದೇವ ಹೃದ್ರೋಗ ಸಂಸ್ಥೆಯ ಡಾ.ಸಿ.ಎನ್‌. ಮಂಜುನಾಥ್‌ ಸೇವಾವಧಿ ವಿಸ್ತರಣೆ

ಜಯದೇವ ಹೃದ್ರೋಗ ಸಂಸ್ಥೆಯ ಡಾ.ಸಿ.ಎನ್‌. ಮಂಜುನಾಥ್‌ ಸೇವಾವಧಿ ವಿಸ್ತರಣೆ
Published 17 ಜುಲೈ 2023, 16:03 IST
Last Updated 17 ಜುಲೈ 2023, 16:03 IST
ಅಕ್ಷರ ಗಾತ್ರ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌ ಅವರ ಸೇವಾವಧಿಯನ್ನು ಆರು ತಿಂಗಳವರೆಗೆ ವಿಸ್ತರಿಸಲು ಸೋಮವಾರ ನಡೆದ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಆಡಳಿತ ಮಂಡಳಿ ಸಭೆ ನಡೆಯಿತು. ಮಂಜುನಾಥ್‌ ಅವರ ಸೇವಾವಧಿ ಜುಲೈ 19ರಂದು ಕೊನೆಗೊಳ್ಳಲಿದೆ. ಮುಂದಿನ ಆರು ತಿಂಗಳವರೆಗೆ ಅವರ ಸೇವಾವಧಿ ವಿಸ್ತರಣೆಯ ಪ್ರಸ್ತಾವಕ್ಕೆ ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಜಯದೇವ ಹೃದ್ರೋಗ ಸಂಸ್ಥೆಯ ಮುಖ್ಯ ಕೇಂದ್ರ ಹಾಗೂ ಪ್ರಾದೇಶಿಕ ಕೇಂದ್ರಗಳಿಗೆ ಸಂಬಂಧಿಸಿದ ಹಲವು ಆಡಳಿತಾತ್ಮಕ ವಿಷಯಗಳು ಸಭೆಯ ಕಾರ್ಯಸೂಚಿಯಲ್ಲಿದ್ದವು. ಬಹುತೇಕ ಪ್ರಸ್ತಾವಗಳಿಗೆ ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT