ಶುಕ್ರವಾರ, ಏಪ್ರಿಲ್ 16, 2021
31 °C

ಕೋವಿಡ್‌ ಬಗ್ಗೆ ಇನ್ನೂ 6 ತಿಂಗಳು ಎಚ್ಚರ ಅಗತ್ಯ: ಡಾ.ಸಿ.ಎನ್. ಮಂಜುನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಕೂಡ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಗಾಗಿ, ಇನ್ನೂ ಆರು ತಿಂಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಜತೆಗೆ ಹೆಚ್ಚಿನ ಜಾಗರೂಕತೆ ವಹಿಸಬೇಕಿದೆ’ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ತಿಳಿಸಿದರು.

ಡಾ.ಬರಗೂರು ರಾಮಚಂದ್ರಪ್ಪ ಪ್ರತಿಷ್ಠಾನವು ಶುಕ್ರವಾರ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕಿ ಡಾ.ಎಚ್.ಎಸ್. ಅನುಪಮಾ, ವಿಮರ್ಶಕ ಡಾ. ಬಸವರಾಜ ಸಬರದ ಹಾಗೂ ಮಂಜುನಾಥ್ ಚಾಂದ್ ಅವರಿಗೆ ‘ಶ್ರೀಮತಿ ರಾಜಲಕ್ಷ್ಮಿ ಬರಗೂರು ಪುಸ್ತಕ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು. ಈ ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಬಹುಮಾನ ಒಳಗೊಂಡಿದೆ.

‘ಇತ್ತೀಚಿನ ದಿನಗಳಲ್ಲಿ ಮದುವೆ, ಜಾತ್ರೆ, ಸಭೆ–ಸಮಾರಂಭ ಸೇರಿದಂತೆ ಸಾರ್ವಜನಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚಾಗಿವೆ. ದೇವಾಲಯಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಆದ್ದರಿಂದ ದೇವಾಲಯದ ಅರ್ಚಕರಿಗೂ ಕೋವಿಡ್ ಪರೀಕ್ಷೆ ಮಾಡುವ ಅಗತ್ಯ ವಿದೆ. ಸಾರ್ವಜನಿಕ ಸ್ಥಳದಲ್ಲಿ ಜನರು ಗುಂಪಾಗಿ ಸೇರಬಾರದು. ಸರಿಯಾದ ರೀತಿಯಲ್ಲಿ ಮುಖಗವಸನ್ನು ಧರಿಸಿ, ಪರಸ್ಪರ ಅಂತರವನ್ನು ಕಾಯ್ದುಕೊಳ್ಳಬೇಕು. ಕೋವಿಡ್‌ ಲಸಿಕೆಯ ಬಗೆಗಿನ ವದಂತಿಗಳಿಗೆ ಕಿವಿಗೊಡಬಾರದು. ಲಸಿಕೆ ಸುರಕ್ಷಿತವಾಗಿದೆ’ ಎಂದು ಡಾ.ಮಂಜುನಾಥ್ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು