ಬುಧವಾರ, ಜನವರಿ 26, 2022
25 °C

ಆರ್‌ಜಿಯುಎಚ್‌ಎಸ್‌ಗೆ ಡಾ. ರಮೇಶ್‌ ಕುಲಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡಾ. ರಮೇಶ್

ಬೆಂಗಳೂರು: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್‌) ನೂತನ ಕುಲಪತಿಯನ್ನಾಗಿ ಡಾ.ಎಂ.ಕೆ. ರಮೇಶ್‌ ಅವರನ್ನು ನೇಮಿಸಲಾಗಿದೆ.

ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ರಮೇಶ್‌ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ರಮೇಶ್‌ ಅವರು ಇದುವರೆಗೆ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಾಗಿದ್ದರು.

ಇದೇ ವಿಶ್ವವಿದ್ಯಾಲಯದಲ್ಲಿ ರಮೇಶ್‌ ಅವರು ಹಂಗಾಮಿ ಕುಲಪತಿಯಾಗಿ ಮತ್ತು ಕುಲಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ದಿನದಿಂದ ಮೂರು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯೋಮಿತಿಯಾಗುವವರೆಗೆ, ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೂ ಈ ಹುದ್ದೆಯಲ್ಲಿ ಇರಲಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು