ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲುಂಬಿನಿ ಉದ್ಯಾನದಲ್ಲಿದ್ದ ರಾಜ್‌ಕುಮಾರ್ ಕಂಚಿನ ಪುತ್ಥಳಿ ಕಳವು

Last Updated 6 ಫೆಬ್ರುವರಿ 2022, 20:31 IST
ಅಕ್ಷರ ಗಾತ್ರ

ಬೆಂಗಳೂರು: ಲುಂಬಿನಿ ಉದ್ಯಾನದಲ್ಲಿದ್ದ ನಟ ರಾಜ್‌ಕುಮಾರ್ ಅವರ ಕಂಚಿನ ಪುತ್ಥಳಿ ಕಳ್ಳತನವಾಗಿದ್ದು, ಈ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಪುತ್ಥಳಿ ಕಳ್ಳತನ ಬಗ್ಗೆ ಅರಣ್ಯ ಅಧಿಕಾರಿ ಯೋಗೇಶ್‌ ಎಂಬುವರು ದೂರು ನೀಡಿದ್ದಾರೆ. ಅದರನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಳ್ಳತನ ಆರೋಪದಡಿ ಇಬ್ಬರನ್ನುವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಲುಂಬಿನಿ ಉದ್ಯಾನವನ್ನು ಅರಣ್ಯ ಇಲಾಖೆ ನಿರ್ವಹಣೆ ಮಾಡುತ್ತಿದೆ. ರಾಜ್‌ಕುಮಾರ್ ನೆನಪಿಗಾಗಿ ಕೆಲ ತಿಂಗಳ ಹಿಂದೆ ಕಂಚಿನ ಪುತ್ಥಳಿ ಅನಾವರಣಗೊಳಿಸಲಾಗಿತ್ತು. ಜ. 24ರಂದು ಯಾರೋ ದುಷ್ಕರ್ಮಿಗಳು, ಪುತ್ಥಳಿ ಕದ್ದುಕೊಂಡು ಹೋಗಿರುವುದಾಗಿ ಅರಣ್ಯ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ‘ ಎಂದೂ ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT