ನವದೆಹಲಿ: ಬೆಂಗಳೂರಿನ ಡಾ.ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ಹೊಸ ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ತಕ್ಷಣವೇ ಸ್ಥಗಿತಗೊಳಿಸಲು ಕ್ರಮಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಆದೇಶ ನೀಡಿದೆ.

2018ರ ಆಗಸ್ಟ್ 3ರ ನಂತರ ನಿರ್ಮಿಸಿರುವ ಕಟ್ಟಡಗಳನ್ನು ಸಕ್ರಮಗೊಳಿಸಲು ಸಾಧ್ಯವಿಲ್ಲ. ಹೀಗಾಗಿ, ಈ ಕಟ್ಟಡಗಳನ್ನು ಒಡೆದು ಹಾಕಬಹುದಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠವು ಈ ನಿರ್ದೇಶನ ನೀಡಿದೆ. ಕಟ್ಟಡ ನಿರ್ಮಾಣ ಚಟುವಟಿಕೆ ಸ್ಥಗಿತಗೊಳಿಸುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪೀಠವು ತಿಳಿಸಿದೆ.

ಇದೇ ವೇಳೆ, ಡಾ.ಕೆ.ಶಿವರಾಮ ಕಾರಂತ ಬಡಾವಣೆಗಾಗಿ ಗುರುತಿಸಲಾದ ಜಾಗದಲ್ಲಿ ಕಾನೂನುಬದ್ಧವಾಗಿ ನಿರ್ಮಾಣವಾಗಿರುವ ಕಟ್ಟಡಗಳು ಮತ್ತು ವಾಸದ ಮನೆಗಳನ್ನು ಗುರುತಿಸುವ ಸಲುವಾಗಿ ಸುಪ್ರೀಂ ಕೋರ್ಟ್ ನೇಮಿಸಿರುವ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ನೇತೃತ್ವದ ಸಮಿತಿಯ ಅವಧಿಯನ್ನು 2022ರ ಮಾರ್ಚ್ 31ರವರೆಗೆ ನ್ಯಾಯಾಲಯವು ವಿಸ್ತರಿಸಿದೆ.

ಬಿಡಿಎಗೆ ಹೆಚ್ಚುವರಿಯಾಗಿ ಒಬ್ಬ ಕಾರ್ಯನಿರ್ವಾಹಕ ಎಂಜಿನಿಯರ್ (ಇಇ), ಇಬ್ಬರು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಮತ್ತು ನಾಲ್ವರು ಸಹಾಯಕ ಎಂಜಿನಿಯರ್‌ಗಳನ್ನು (ಎಇ) 15 ದಿನಗಳ ಒಳಗೆ ನಿಯೋಜಿಸಬೇಕು ಎಂದು ಪೀಠವು ರಾಜ್ಯ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದೆ.

ಜೂನ್ 2ರಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿದ ಪೀಠವು, ’ಇದುವರೆಗೆ ಬಿಡಿಎ ಯಾವುದೇ ಭೂ ಸ್ವಾಧೀನ ಕೈಗೊಂಡಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಸ್ವಾಧೀನ ಪ್ರಕ್ರಿಯೆಯನ್ನು ಬಿಡಿಎ ತ್ವರಿತಗೊಳಿಸಿ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.