ಬೆಂಗಳೂರು: ಡಾ. ಸಿದ್ದಲಿಂಗಯ್ಯ ಸ್ಮಾರಕ ಪ್ರತಿಷ್ಠಾನವು ಸೋಮವಾರ (ಜೂ.21) ಬೆಳಿಗ್ಗೆ 10 ಗಂಟೆಗೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಸಿದ್ಧಲಿಂಗಯ್ಯ ಅವರ ಸ್ಮರಣೆ ಹಾಗೂ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ.

ನುಡಿ ನಮನ ಕಾರ್ಯಕ್ರಮಕ್ಕೆ ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಅವರು ಚಾಲನೆ ನೀಡಲಿದ್ದು,
ಡಾ. ಸಿದ್ದಲಿಂಗಯ್ಯ ಅವರ ಸಮಗ್ರ ಕಾವ್ಯ ‘ಬೋಧಿ ವೃಕ್ಷದ ಕೆಳಗೆ’ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಸ್. ಜಾಫೆಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೃತಿಯ ಕುರಿತು ವಿಮರ್ಶಕ
ಡಾ. ಬೈರಮಂಗಲ ರಾಮೇಗೌಡ ಮಾತನಾಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಕಾವ್ಯ ನಮನ ಕಾರ್ಯಕ್ರಮ ನಡೆಯಲಿದ್ದು, ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಗೀತ ನಮನ ಕಾರ್ಯಕ್ರಮ ನಡೆಯಲಿದೆ. ಸಿದ್ದಲಿಂಗಯ್ಯ ಅವರ ಕವಿತೆಗಳ ಗಾಯನ ನಡೆಯಲಿದೆ. ಜಾನಪದ ಗಾಯಕ ಬಾನಂದೂರು ಕೆಂಪಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ರಂಗಕರ್ಮಿ ಜನಾರ್ಧನ್ (ಜನ್ನಿ) ಭಾಗವಹಿಸಲಿದ್ದಾರೆ. ಆನ್ ಲೈನ್‌ನಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಇರಲಿದೆಎಂದು ಪ್ರತಿಷ್ಠಾನದ ಅಧ್ಯಕ್ಷೆ ಡಾ.ಮಾನಸ ಸಿದ್ದಲಿಂಗಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.