ಶುಕ್ರವಾರ, ಸೆಪ್ಟೆಂಬರ್ 17, 2021
30 °C
ಪ್ರಾಂಶುಪಾಲರು, ಸಹಾಯಕ ಪ್ರಾಧ್ಯಾಪಕರ ಹುದ್ದೆ

ನೇಮಕಾತಿಗೆ ಕರಡು ನಿಯಮಗಳ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರು ಹಾಗೂ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಮಾರ್ಗಸೂಚಿಯಂತೆ ಸರ್ಕಾರ ಮಂಗಳವಾರ ಕರಡು ನಿಯಮಗಳನ್ನು ರೂಪಿಸಿ ಗೆಜೆಟ್‌ನಲ್ಲಿ ಪ್ರಕಟಿಸಿದೆ.

ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡುವಾಗ ಸಂಬಂಧಪಟ್ಟ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆ ನಡೆಸಬೇಕು, ಅದರಲ್ಲಿ ತಲಾ 100 ಅಂಕದ ಕನ್ನಡ ಮತ್ತು ಇಂಗ್ಲಿಷ್‌ ಭಾಷಾ ಸಾಮರ್ಥ್ಯ ಅಳೆಯುವ ಪ್ರಶ್ನೆಪತ್ರಿಕೆಗಳು ಕಡ್ಡಾಯವಾಗಿದ್ದು, 50 ಅಂಕದ ಸಾಮಾನ್ಯ ಜ್ಞಾನ ಹಾಗೂ 150 ಅಂಕದ ಐಚ್ಛಿಕ ವಿಷಯಗಳ ಪ್ರಶ್ನೆಪತ್ರಿಕೆಯೂ ಇರಬೇಕು ಎಂದು ಸೂಚಿಸಲಾಗಿದೆ.

ಪ್ರಾಂಶುಪಾಲರನ್ನು ನೇಮಕ ಮಾಡುವುದಕ್ಕೆ ಪಿಎಚ್‌.ಡಿ. ಅರ್ಹತೆಯಲ್ಲದೆ, 15 ವರ್ಷಗಳ ಬೋಧನಾ ಅನುಭವ, ಕನಿಷ್ಠ 10 ಸಂಶೋಧನಾ ಪ್ರಬಂಧಗಳನ್ನು ಪ್ರತಿಷ್ಠಿತ ನಿಯತಕಾಲಿಕಗಳಲ್ಲಿ ಪ್ರಕಟಿಸಿದ ಮಾನದಂಡ ಸೂಚಿಸಲಾಗಿದೆ. ಎರಡು ಗಂಟೆಗಳ ಸ್ಪರ್ಧಾತ್ಮಕ ಪರೀಕ್ಷೆಯೂ ಇದೆ.

ಆಕ್ಷೇಪಗಳಿದ್ದಲ್ಲಿ, 15 ದಿನಗಳ ಒಳಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ, ಬಹುಮಹಡಿ ಕಟ್ಟಡ, ಬೆಂಗಳೂರು–1 ಇಲ್ಲಿಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

‘ಕರಡು ನಿಮಯಗಳಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸಿರುವುದರಿಂದ ಇತರ ರಾಜ್ಯದವರು ಹುದ್ದೆ ಪಡೆಯುವ ಅವಕಾಶ ಕಡಿಮೆ. ಸರ್ಕಾರ ಶೀಘ್ರ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು’ ಎಂದು ಪದವಿ ಕಾಲೇಜು ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ್‌ ಪ್ರತಿಕ್ರಿಯಿಸಿದ್ದಾರೆ.

‘ಮರೆತೇ ಹೋಗಿದೆ 1,242 ಹುದ್ದೆ ಭರ್ತಿ’ ಎಂಬ ಶೀರ್ಷಿಕೆಯಡಿ ಜನವರಿ 30ರಂದು ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು