ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷಾಚರಣೆ: ವಾಹನ ತಪಾಸಣೆ ಆರಂಭ

Published 21 ಡಿಸೆಂಬರ್ 2023, 16:20 IST
Last Updated 21 ಡಿಸೆಂಬರ್ 2023, 16:20 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ಮದ್ಯ ಕುಡಿದು ವಾಹನ ಚಾಲನೆ ಮಾಡುವವರ ಪತ್ತೆಗಾಗಿ ಸಂಚಾರ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

ನಗರದ ಹಲವು ಜಂಕ್ಷನ್ ಹಾಗೂ ಪ್ರಮುಖ ರಸ್ತೆಗಳಲ್ಲಿ ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ಸುಮಾರು 3,000 ವಾಹನಗಳನ್ನು ತಡೆದು ಆಲ್ಕೋಮೀಟರ್ ಸಹಾಯದಿಂದ ಚಾಲಕರನ್ನು ತಪಾಸಣೆಗೆ ಒಳಪಡಿಸಿದರು.

ಮದ್ಯ ಕುಡಿದು ಚಾಲನೆ ಮಾಡುತ್ತಿದ್ದ 73 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ವಾಹನಗಳನ್ನು ಜಪ್ತಿ ಮಾಡಿದ್ದಾರೆ. ದಂಡ ಪಾವತಿ ಮಾಡುವಂತೆ ನೋಟಿಸ್ ನೀಡಿದ್ದಾರೆ.  

‘ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮದ್ಯ ಕುಡಿದು ವಾಹನ ಚಾಲನೆ ಮಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಇದರಿಂದಾಗಿ ಅಪಘಾತಗಳು ಸಂಭವಿಸುತ್ತವೆ. ಇದೇ ಕಾರಣಕ್ಕೆ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ. ಹೊಸ ವರ್ಷಾಚರಣೆ ಮುಗಿಯುವವರೆಗೂ ಕಾರ್ಯಾಚರಣೆ ಮುಂದುವರಿಯಲಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT