ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಮದ್ಯ ಸೇವಿಸಿ ಚಾಲನೆ: 23 ಚಾಲಕರ ವಿರುದ್ಧ ಪ್ರಕರಣ

Published 9 ಜುಲೈ 2024, 16:32 IST
Last Updated 9 ಜುಲೈ 2024, 16:32 IST
ಅಕ್ಷರ ಗಾತ್ರ

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಶಾಲಾ ವಾಹನಗಳ ಚಾಲಕರ ವಿರುದ್ಧ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಗರದ ವಿವಿಧೆಡೆ ಮಂಗಳವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, 3,016 ವಾಹನಗಳ ತಪಾಸಣೆ ನಡೆಸಿದರು. ಮದ್ಯ ಸೇವಿಸಿದ್ದ 23 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮುಂದಿನ ಕ್ರಮ ಕೈಗೊಳ್ಳುವಂತೆ ಕೋರಿ ಚಾಲಕರ ವಾಹನ ಚಾಲನಾ (ಡಿಎಲ್‌) ಪರವಾನಗಿಯನ್ನು ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಕಚೇರಿಗೆ ಕಳುಹಿಸಲಾಗಿದೆ ಹಾಗೂ ತಪಾಸಣೆ ವೇಳೆ ಫಿಟ್‌ನೆಸ್ ಪ್ರಮಾಣ ಪತ್ರ ಹೊಂದಿರದ 11 ವಾಹನಗಳನ್ನು ಸಂಬಂಧಪಟ್ಟ ಆರ್‌ಟಿಒ ವಶಕ್ಕೆ ಒಪ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT